Ad imageAd image

ರಾಜ್ಯ ಸರ್ಕಾರಕ್ಕೆ ಎರಡು ವರ್ಷ: ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ

Bharath Vaibhav
ರಾಜ್ಯ ಸರ್ಕಾರಕ್ಕೆ ಎರಡು ವರ್ಷ: ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ
WhatsApp Group Join Now
Telegram Group Join Now

ಹೊಸಪೇಟೆ : ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಹಮ್ಮಿಕೊಳ್ಳಲಾಗಿದೆ.

4 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, 1,11,111 ಮಂದಿಗೆ ಭೂ ಹಕ್ಕುಪತ್ರ ವಿತರಿಸಲಾಗುವುದು. ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಮಧ್ಯ ಕರ್ನಾಟಕದಲ್ಲಿ ಬಲ ಪ್ರದರ್ಶಿಸುವ ಆಶಯದಡಿ ವಿಜಯನಗರ ಜಿಲ್ಲೆಯನ್ನು ಸಮಾವೇಶಕ್ಕೆ ಆಯ್ದುಕೊಳ್ಳಲಾಗಿದೆ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸಮಾವೇಶಕ್ಕೆ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ನಗರದಾದ್ಯಂತ ಕಾಂಗ್ರೆಸ್ ಬಾವುಟಗಳು, ನಾಯಕರ ಬೃಹತ್ ಕಟೌಟ್ ಗಳು ರಾರಾಜಿಸುತ್ತಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ.20ಕ್ಕೆ ಎರಡು ವರ್ಷ ಪೂರ್ಣಗೊಳ್ಳಲಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ವಾಗ್ದಾನದಂತೆ ಸರ್ಕಾರ ರಚನೆ ನಂತರದ ಮೊದಲ ಸಚಿವ ಸಂಪುಟದಲ್ಲಿಯೇ ಐದು ಗ್ಯಾರಂಟಿ ಯೋಜನೆಗಳನು ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿತ್ತು.

ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ದೇಶದ ಇತರೆ ರಾಜ್ಯಗಳಿಗೂ ಮಾದರಿಯಾಗಿದೆ. ಜಾತಿ, ಧರ್ಮ, ಭಾಷೆಯ ಭೇಧವಿಲ್ಲದೆ ನಾಡಿನ ಎಲ್ಲ ಜನರ ಮನೆ ಮನೆಗಳಿಗೆ ಯೋಜನೆಗಳು ತಲುಪಿವೆ. ಪ್ರಗತಿಯತ್ತ ಕರ್ನಾಟಕ ರಾಜ್ಯ ಮುನ್ನೆಡೆದಿದೆ.

ಸರ್ಕಾರ ಈ ಐತಿಹಾಸಿಕ ಸಾಧನೆಯನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಮೇ 20 ರಂದು ಕಂದಾಯ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಕಂದಾಯ ಗ್ರಾಮ ಹಕ್ಕು ಪತ್ರ ಸಮರ್ಪಣೆ ಮಾಡುವುದರೊಂದಿಗೆ ನೆಮ್ಮದಿ ಕಲ್ಪಿಸಲಾಗುತ್ತಿದೆ. ಎರಡು ವರ್ಷಗಳ ಸಾಧನೆಯನ್ನು ನಾಡಿನ ಜನರಿಗೆ ಸಮರ್ಪಣೆ ಮಾಡುವುದರೊಂದಿಗೆ ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆಯನ್ನು ಈ ಸಂದರ್ಭದಲ್ಲಿ ಕೈಗೊಳ್ಳಲಾಗುವುದು.

 

WhatsApp Group Join Now
Telegram Group Join Now
Share This Article
error: Content is protected !!