ಚಿಕ್ಕೋಡಿ : ಸದಲಗಾ ಮತಕ್ಷೇತ್ರದ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರು ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಶಾಸಕರು, ಕಂದಾಯ ಇಲಾಖೆಯಲ್ಲಿ ಪ್ರಸ್ತುತ ನಿರ್ವಹಿಸುತ್ತಿರುವ ವಿವಿಧ ಐಟಿ ವ್ಯವಸ್ಥೆಗಳನ್ನು ಬಗರ್ ಹುಕುಂ ತಂತ್ರಾಂಶ, ಪೋಡಿ ಪ್ರಕರಣ (1&5 ಮತ್ತು 6&10) ತಂತ್ರಾಂಶ, ಪಹಣಿ ದಾಖಲೆಗಳೊಂದಿಗೆ ಆಧಾರ್ ಜೋಡಣೆ, ಸರ್ಕಾರಿ ಜಮೀನುಗಳ ಸಂರಕ್ಷಣೆ, ಲ್ಯಾಂಡ್ ಬಿಟ್ ಯೋಜನೆಯಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸುವ ಸಲುವಾಗಿ ಸರ್ಕಾರವು ಲ್ಯಾಪ್ ಟಾಪ್ ನೀಡುತ್ತಿದೆ.
ಇದನ್ನುಸದುಪಯೋಗ ಪಡಿಸಿಕೊಂಡು ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶ್ರೀ ಸಿ ಎಸ್ ಕುಲಕರ್ಣಿ, ಡಿಡಿಪಿಐ ಶ್ರೀ ಮನ್ನಿಕೇರಿ, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ




