ಚಾಮರಾಜನಗರ:- ಯಳಂದೂರು-ರಾಜ್ಯದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು ಅದರ ಹಿನ್ನೆಲೆಯಲ್ಲಿ ಯಳಂದೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ, ಪಟ್ಟಣ ಪಂಚಾಯಿತಿ ಹಾಗೂ ತಾಲೂಕು ಆರೋಗ್ಯ ಇಲಾಖೆ ಸಹಯೋಗದೊಂದಿಗೆ. ಹಿರಿಯರಲ್ಲಿ ಅಂಗವಿಕಲರಿಗೆ ಹಾಗೂ ಶಾಲಾ ಮಕ್ಕಳಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಬೀದಿ ನಾಟಕ ಆಡುವುದರ ಮೂಲಕ ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು.
ಪಟ್ಟಣದ ಮುಖ್ಯ ಅಧಿಕಾರಿಗಳಾದ ಮಹೇಶ್ ಕುಮಾರ್ ರವರು ಮಾತಾಡಿ ಡೆಂಗ್ಯೂ ಜ್ವರದ ಬಗ್ಗೆ ಭಯ ಬೇಡ ಜಾಗೃತರಾಗಿ ನಮ್ಮ ಸುತ್ತ ಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಮೂಲಕ ಮನೆಯ ಅಕ್ಕ ಪಕ್ಕ ನೀರು ಇರು ನಿಲ್ಲದ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಾದ ಮಲ್ಲಿಕಾರ್ಜುನ. ಪರಶಿವಮೂರ್ತಿ. ರಘು ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರಾದ ರಂಗನಾಥ ಭಾಗವಹಿಸಿದ್ದರು
ವರದಿ :ಸ್ವಾಮಿ ಬಳೇಪೇಟೆ