Ad imageAd image

ಡೆಂಗ್ಯೂ ಜ್ವರದ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ

Bharath Vaibhav
ಡೆಂಗ್ಯೂ ಜ್ವರದ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ
WhatsApp Group Join Now
Telegram Group Join Now

ಬೆಳಗಾವಿ:- ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು ರಾಜ್ಯ ಸರ್ಕಾರ ವೇಗವಾಗಿ ಹರಡುತ್ತಿರುವ ಈ ಮಾರಣಾಂತಿಕ ಖಾಯಿಲೆ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತಿದೆ. ಬೆಳಗಾವಿ ನಗರದ ಬಿಮ್ಸ(ಸಿವಿಲ್)ಆಸ್ಪತ್ರೆಗೆ ಧಿಡೀರ್ ಭೇಟಿ

ಬೆಳಗಾವಿಯ ಸಂಸದ ಜಗದೀಶ್ ಶೆಟ್ಟರ್,ಭಾ.ಜ.ಪ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಾಜಿ ಶಾಸಕ ಸಂಜಯ್ ಪಾಟೀಲ್ ಅವರು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಧಿಡೀರ್ ಭೇಟಿ ನೀಡಿದರು. ಡೆಂಗ್ಯೂ ಪೀಡಿತ ರೋಗಿಗಳೊಂದಿಗೆ ಮಾತನಾಡಿ, ಜಿಲ್ಲಾಸ್ಪತ್ರೆಯ ಕಾರ್ಯ ಚಟುವಟಿಕೆಗಳ ಪರಿಶೀಲನೆ ಮಾಡಿದರು.ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್‌ ಗೂನ್ಯಾ ಹಾಗೂ ಮಲೇರಿಯಾ ಸಾಂಕ್ರಾಮಿಕ ರೋಗ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಆರೋಗ್ಯಾಧಿಕಾರಿ, ಬಿಮ್ಸ್ ನಿರ್ದೇಶಕರು, ವೈದ್ಯಕೀಯ ಅಧಿಕಾರಿಗಳು, ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ,ರೋಗ ನಿಯಂತ್ರಣ ಹಾಗೂ ನಿವಾರಣೆಗಳ ಬಗ್ಗೆ ಚರ್ಚಿಸಿದರು..
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು ರಾಜ್ಯದ
ಮುಖ್ಯಮಂತ್ರಿಯವರು, ಸಚಿವ ಶಾಸಕರು, ಜಿಲ್ಲಾಧಿಕಾರಿಗಳು ಜನರ ಬಳಿಗೆ ಹೋಗಿ ಸಮಸ್ಯೆ ಆಲಿಸಬೇಕು ಎಂಬ ಸೂಚನೆ ನೀಡಿರುವುದು ಆಡಳಿತ ಸರಿಯಾಗಿ ನಡೆಯುತ್ತಿಲ್ಲ ಎಂಬ ಸಂಶಯಕ್ಕೆ ಕಾರಣವಾಗಿದೆ.

ಬೆಳಗಾವಿ ಜಿಲ್ಲಾಸ್ಪತ್ರೆಯು ಡೆಂಗ್ಯೂ ನಿಯಂತ್ರಣ ಹಾಗೂ ರೋಗಿಗಳ ಉಪಚಾರದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಇನ್ನು ಪರಿಣಾಮಕಾರಿಯಾದ ಸೇವೆಯನ್ನು ಸಾರ್ವಜನಿಕರಿಗೆ ಒದಗಿಸುವಂತೆ ಆಸ್ಪತ್ರೆಯ ವೈದ್ಯರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಾ.ಜ.ಪಾ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗಿವೆ, ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆ ಶೀಘ್ರವೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು, ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿತಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ, ಮುರಗೇಂದ್ರಗೌಡ ಪಾಟೀಲ್, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಜಿಲ್ಲಾ ಕೋಶಾಧ್ಯಕ್ಷ ಮಲ್ಲಿಕಾರ್ಜುನ ಮಾದಮ್ಮನವರ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೋಲಕಾರ, ವಿಠ್ಠಲ್ ಸಾಯಣ್ಣವರ ಅವರು ಉಪಸ್ಥಿತರಿದ್ದರು

ವರದಿ:- ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!