ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ಬಿಜೆಪಿ ಹಾಗೂ ಜೆಡಿಎಸ್ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಮೈಸೂರಿಗೆ ಪಾದಯಾತ್ರೆ ಹೊರಟಿದೆ.
ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ HD ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಇದಾದ ಬಳಿಕ ಬಿಜೆಪಿ-ಜೆಡಿಎಸ್ ನಾಯಕರು ಒಟ್ಟಾಗಿ ಪಾದಯಾತ್ರೆ ಹೊರಟಿದ್ದಾರೆ.
ಸುರಿವ ಮಳೆಯನ್ನೂ ಲೆಕ್ಕಿಸದೇ ಬಿ.ವೈ ವಿಜಯೇಂದ್ರ , ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರು ಪಾದಯಾತ್ರೆ ಕೈಗೊಂಡಿದ್ದಾರೆ. ಈ ಕುರಿತಾದ ವಿಡಿಯೋ, ಫೋಟೋವನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
.