ಸಿರುಗುಪ್ಪ : –ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲೀಮ್ ಭಾಂದವರು ಸೋಮವಾರ ತಾಲೂಕಿನೆಲ್ಲೆಡೆ ಶ್ರದ್ದಾ ಭಕ್ತಿಯಿಂದ ಆಚರಿಸಿದರು.
ಹಬ್ಬದ ಪ್ರಯುಕ್ತ ನಗರದ ಕೆಂಚನಗುಡ್ಡ ರಸ್ತೆಯಲ್ಲಿನ ಈದ್ಗಾ ಮೈದಾನದಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ಹಾಜಿ ಹುಸೇನ್‌ಸಾಬ್ ಯಾದವಾಡ ಅವರು ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿ ಮುಖಂಡರೊಂದಿಗೆ ಶುಭಾಶಯಗಳ ವಿನಿಮಯ ಮಾಡಿಕೊಂಡರು.ಕಾರ್ಯಕ್ರಮದಲ್ಲಿ ಶಾಸಕ ಬಿ.ಎಮ್.ನಾಗರಾಜ ಅವರು ಮಾತನಾಡಿ ನಮ್ಮ ಕ್ಷೇತ್ರದಲ್ಲಿ ಉತ್ತಮ ಮಳೆ ಬೆಳೆಯಾಗಲೆಂದು ಭಗವಂತನಲ್ಲಿ ಪ್ರಾರ್ಥಿಸೋಣ. ಸಮಾಜದಲ್ಲಿ ಎಲ್ಲರೂ ಸಹೋದರರಂತೆ ಬಾಳೋಣ ಯಾರೋ ಹಬ್ಬಿಸುವ ವದಂತಿಗಳಿಗೆ ಕಿವಿಗೊಡದೇ ಉತ್ತಮ ಸಮಾಜವನ್ನು ನಿರ್ಮಿಸೋಣ.
ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಷಾದಿಮಹಲ್ ನಿರ್ಮಾಣಕ್ಕಾಗಿ ಎಲ್ಲಾ ಮುಖಂಡರು ಬೇಡಿಕೆ ಸಲ್ಲಿಸಿದ್ದೀರಿ, ಸರ್ಕಾರದಿಂದ 2 ರಿಂದ 5ಕೋಟಿ ಅನುದಾನ ತಂದು ತಂದು ವಕ್ಫ್ ಬೋರ್ಡ್ ಕಡೆಯಿಂದ ಜಾಗವನ್ನು ಖರೀದಿಸಿ ನಿರ್ಮಾಣ ಕಾಮಗಾರಿ ಆರಂಭಿಸುವುದಾಗಿ ಭರವಸೆ ನೀಡಿದರು.ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿಗಳು ಹಾಗೂ ಅವರ ಪರವಾಗಿ ಪೋಷಕರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ಮೌಲ್ವಿ ಖತೀಬ್ ಅಮೀಷ್ ಭಾಷ, ಖತೀಬ್ ಜಹಿರುದ್ದೀನ್ ಬಾಬಾ, ವಕ್ಫ್ ಬೋರ್ಡ್ ಜಿಲ್ಲಾ ಉಪಾಧ್ಯಕ್ಷ ಎನ್.ಖಾಜಾಸಾಬ್, ಸದಸ್ಯ ಮೀರಾ ಹುಸೇನ್, ಹಿರಿಯ ವಕೀಲರಾದ ಎನ್.ಅಬ್ದುಲ್‌ಸಾಬ್, ನಗರಸಭೆ ಸದಸ್ಯ ಗಣೇಶ, ಮುಖಂಡರಾದ ಹಂಡಿ ಆಸಿಮ್‌ಸಾಬ್, ಹಂಡಿ ಬಾಷಾಸಾಬ್ ಚಿಟಿಗಿ ಹುಸೇನ್‌ಸಾಬ್, ವೆಂಕಟೇಶ ಇನ್ನಿತರ ಪದಾಧಿಕಾರಿಗಳು ಇದ್ದರು.
ವರದಿ :-ಶ್ರೀನಿವಾಸ ನಾಯ್ಕ