ಮಾನ್ವಿ : ಮಾನ್ವಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಬಿಡುಗಡೆಯಾದ ಅನುದಾನ ದುರ್ಬಳಕೆ ಮಾಡಿಕೊಳ್ಳುತ್ತಿರುವ ನಿರ್ಮಿತಿ ಕೇಂದ್ರ,ಕೆಆರ್‌ಡಿಎಲ್, ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಎಂಜಿನಿಯರಿAಗ್ ಇಲಾಖೆ ವಿರುದ್ಧ ಡಿಸೆಂಬರ್ ೫ರಂದು ಶಾಸಕರ ಭವನದ ಮುಂದೆ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಜನಶಕ್ತಿ ಕೇಂದ್ರದ ಅಧ್ಯಕ್ಷ ಪ್ರಭುರಾಜ ಕೊಡ್ಲಿ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಆಹಾರ ಪದಾರ್ಥಗಳನ್ನು ಸಮರ್ಪಕವಾಗಇ ಹಾಗೂ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸರಬರಾಜು ಮಾಡಬೇಕು ಮತ್ತು ಹಣ ದುರ್ಬಳಕೆಯಾಗದಂತೆ ತಡೆಯಬೇಕು. ಡಾ.ಬಿ.ಆರ್.ಅಂಬೇಡ್ಕರ್,ಶ್ರೀ ಮಹರ್ಷಿ ವಾಲ್ಮೀಕಿ ಮತ್ತು ಬಾಬು ಜಗಜೀವನರಾಮ್ ಭವನ ನಿರ್ಮಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಕಲ್ಮಲಾ ಕ್ರಾಸ್‌ದಿಂದ ಸಿಂಧನೂರುವರೆಗೂ ನಡೆದಿರುವು ರಾಜ್ಯ ಹೆದ್ದಾರಿಯ ಕಾಮಗಾರಿ ಸುರಕ್ಷತೆ ಕ್ರಮ ತೆಗೆದುಕೊಳ್ಳದೆ ಅಂದಾಜು ಪಟ್ಟಿಯಂತೆ ರಸ್ತೆ ಕಾಮಗಾರಿಯನ್ನು ನಿರ್ವಹಿಸದೆ ತೀರಾ ಕಳಪೆ ಮಟ್ಟದ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಮಾನ್ವಿ ಪಟ್ಟಣದಲ್ಲಿ ಹೊಸ ಬಸ್ ನಿಲ್ದಾಣವನ್ನು ಹಳೆ ಡಿಪೋ ಸ್ಥಳದಲ್ಲಿ ನಿರ್ಮಿಸುವುದನ್ನು ಸಾರ್ವಜನಿಕರು ಮತ್ತು ಸಂಚಾರದ ದೃಷ್ಟಿಯಿಂದ ಮರು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ವರದಿ: ಶಿವ ತೇಜ