Ad imageAd image

ಮೊದಲ ದಿನವೇ 250 ಕೋಟಿ ರೂಪಾಯಿ ಬಾಚಿದ ಧುರಂಧರ್ 2

Bharath Vaibhav
ಮೊದಲ ದಿನವೇ 250 ಕೋಟಿ ರೂಪಾಯಿ ಬಾಚಿದ ಧುರಂಧರ್ 2
WhatsApp Group Join Now
Telegram Group Join Now

ಬೆಂಗಳೂರು : ಧುರಂಧರ್ 2′ ಸಿನಿಮಾ ದಾಖಲೆಯ ಮೇಲೆ ದಾಖಲೆ ಬರೆದಿದೆ. ಮೊದಲ ದಿನವೇ ಚಿತ್ರ ಅದ್ಭುತ ಯಶಸ್ಸು ಕಂಡಿದೆ.

ಈ ಚಿತ್ರದ ಒಟ್ಟಾರೆ ಕಲೆಕ್ಷನ್ 250 ಕೋಟಿ ರೂಪಾಯಿ ಸಮೀಪಿಸಿದೆ. ಇದು ಚಿತ್ರದ ಅಬ್ಬರವನ್ನು ತೋರಿಸುತ್ತದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿದೆ.

ಭಾರತ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿ ಇದು ಬದಲಾಗಲಿದೆಯೇ ಎಂಬ ಕುತೂಹಲ ಮೂಡಿದೆ.

‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದುದ್ದಕ್ಕೂ ಅವರೇ ಹೈಲೈಟ್ ಆಗುತ್ತಾರೆ. ಸಂಜಯ್ ದತ್ ಅರ್ಜುನ್ ರಾಮ್​​ಪಾಲ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಗಳಿಕ ವಿವರ ಸಿಕ್ಕಿದೆ.

‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಹಾಗೂ ಮೊದಲ ದಿನದ ಕಲೆಕ್ಷನ್ ಸೇರಿದರೆ 236 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ.

ಇದರಲ್ಲಿ ಭಾರತದಿಂದ 172 ಕೋಟಿ ರೂಪಾಯಿ ಹಾಗೂ ವಿದೇಶದಿಂದ 64 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಭಾರತದ ನೆಟ್ ಕಲೆಕ್ಷನ್ 140 ಕೋಟಿ ರೂಪಾಯಿ ಇದೆ ಎಂದು sacnilk ವರದಿ ಮಾಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!