ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಹಮ್ಮಿಕೊಳ್ಳಲಾದ ಸೈಕಲ್ ಜಾಥಾದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೈಕಲ್‌ನಿಂದ ಮುಗ್ಗರಿಸಿ ಬಿದ್ದಿರುವ ಪ್ರಸಂಗ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ನಡಿಗೆ ಕಾರ್ಯಕ್ರಮ ನಡೆಸಲಾಗಿದೆ.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಸಚಿವ ಈಶ್ವರ್ ಖಂಡ್ರೆ ಸಹಿತ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಆದರೆ ಪರಿಸರ ನಡಿಗೆ ಕಾರ್ಯಕ್ರಮದ ಬಳಿಕ ಸೈಕಲ್ ಜಾಥಾ ವೇಳೆ ನಿಯಂತ್ರಣ ತಪ್ಪಿ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಮೆಟ್ಟಿಲಿಗಳ ಮೇಲೆ ಮುಗ್ಗರಿಸಿ ಬಿದ್ದಿದ್ದಾರೆ. ಬಳಿಕ ಅಲ್ಲಿದ್ದ ನಾಯಕರು ಹಾಗೂ ಸಿಬ್ಬಂದಿ ಡಿಕೆಶಿ ಅವರನ್ನು ಕೇಲಕ್ಕೆ ಎಬ್ಬಿಸಿದ್ದಾರೆ. ಸದ್ಯ ಡಿಸಿಎಂ ಅವರಿಗೆ ಯಾವುದೇ ಗಾಯಗಳಾಗಿಲ್ಲ.