Ad imageAd image

ಬಿಜೆಪಿ ನಾಯಕರ ಧರ್ಮಾಂಧತೆಗೆ ಹೆಣವಾಗುತ್ತಿರುವುದು ಬಡವರ ಮಕ್ಕಳು: ದಿನೇಶ್ ಗುಂಡೂರಾವ್

Bharath Vaibhav
ಬಿಜೆಪಿ ನಾಯಕರ ಧರ್ಮಾಂಧತೆಗೆ ಹೆಣವಾಗುತ್ತಿರುವುದು ಬಡವರ ಮಕ್ಕಳು: ದಿನೇಶ್ ಗುಂಡೂರಾವ್
WhatsApp Group Join Now
Telegram Group Join Now

ಬೆಂಗಳೂರು : ಬಿಜೆಪಿಯವರ ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ ಬಲಿಯಾಗಿದೆ. ಎಷ್ಟೋ ಮನೆಗಳ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ.

ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ನಾಯಕರ ಧರ್ಮಾಂಧತೆಗೆ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು ಎಂದ ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವರು ”ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ.

ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ಬಿಜೆಪಿ ನಾಯಕರ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ ಧರ್ಮಾಂಧತೆಗೆ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ.?

ಬಿಜೆಪಿಯವರ ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ ಬಲಿಯಾಗಿದೆ. ಎಷ್ಟೋ ಮನೆಗಳ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ.

ದ.ಕನ್ನಡದ ಜನ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗಲಿದೆ ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!