ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ತಾಂಡವವಾಡುತ್ತಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ.
ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಒಂದೇ ದರ ನಿಗದಿ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ನಂತರ ಮಾತನಾಡಿದರು. ರಾಜ್ಯದಲ್ಲಿ ಕಳೆದ ಸಾಲಿಗೆ ಹೊಲಿಸಿದರೆ ಈ ಬಾರಿ ಡೆಂಘೀ ಪ್ರಕರಣಗಳ ಟೆಸ್ಟಿಂಗ್ ನಲ್ಲಿ ಶೇ 42 ರಷ್ಟು ಹೆಚ್ಚಳವಾಗಿದೆ.
ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು . ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ಒಂದೇ ದರ ನಿಗದಿ ಮಾಡುತ್ತೇವೆ, ಈ ಸಂಬಂಧ ಇಂದು ಸಂಜೆ ಅಥವಾ ನಾಳೆಯೊಳಗೆ ಅಧಿಕೃತ ಸುತ್ತೋಲೆ ಹೊರಡಿಸುತ್ತೇವೆ ಎಂದು ಹೇಳಿದರು.
ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಡೆಂಗ್ಯೂ ಪಾಸಿಟಿವ್ ಪ್ರಕರಣಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡುವಂತೆ ಕ್ರಮ ಕೈಗೊಳ್ಳಬೇಕು.
ರಾಜ್ಯದಲ್ಲಿ ಕಳೆದ ಸಾಲಿಗೆ ಹೊಲಿಸಿದರೆ ಈ ಬಾರಿ ಡೆಂಘೀ ಪ್ರಕರಣಗಳ ಟೆಸ್ಟಿಂಗ್ ನಲ್ಲಿ ಶೇ 42 ರಷ್ಟು ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.