Ad imageAd image

ಯಡಿಯೂರಪ್ಪರನ್ನ ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಿ : ದಿನೇಶ್ ಗುಂಡೂರಾವ್ 

Bharath Vaibhav
ಯಡಿಯೂರಪ್ಪರನ್ನ ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಿ : ದಿನೇಶ್ ಗುಂಡೂರಾವ್ 
WhatsApp Group Join Now
Telegram Group Join Now

ಬೆಂಗಳೂರು: ಮಹಿಳೆಯರ ವಿಚಾರದಲ್ಲಿ ಬಿಜೆಪಿ ಸಮರ್ಥವಾಗಿದ್ದರೆ ಯಡಿಯೂರಪ್ಪ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಬೇಕು. ಜಾನಿ ಮಾಸ್ಟರ್ ಪ್ರಕರಣದಲ್ಲಿನ ನಿಲುವು, ಯಡಿಯೂರಪ್ಪನವರ ಪ್ರಕರಣದಲ್ಲಿ ಯಾಕಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗೂಂಡುರಾವ್ ಪ್ರಶ್ನಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪೋಕ್ಸೋ ಕಾಯ್ದೆಯಡಿ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೃತ್ಯ ನಿರ್ದೇಶಕರಾದ ಜಾನಿ ಮಾಸ್ಟರ್ ಅವರಿಗೆ ನೀಡಲಾಗಿದ್ದ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಅವರ ಈ ದಿಟ್ಟ ನಿಲುವನ್ನು ನಾನು ಸ್ವಾಗತಿಸುತ್ತೇನೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ನಾವು ಸಹನೆ ಇಟ್ಟುಕೊಳ್ಳಬಾರದು.

ಅಂತಹವರ ವಿರುದ್ಧ ನಾವು ಸಾಧ್ಯವಾದಷ್ಟು ಹೆಚ್ಚಿನ ಕಠಿಣ ನಿರ್ಧಾರ ಕೈಗೊಳ್ಳಬೇಕು. ಸಾರ್ವಜನಿಕ ಕ್ಷೇತ್ರ, ಉದ್ಯಮ ಹಾಗೂ ವ್ಯಾಪಾರದಲ್ಲಿ ಮಹಿಳೆಯರ ಪಾತ್ರ ಹೆಚ್ಚುತ್ತಿರುವ ಸಂದರ್ಭದಲ್ಲಿ ಅವರಿಗೆ ಮುಜುಗರ ಹಾಗೂ ತೊಂದರೆಯಾಗದಂತಹ ವಾತಾವರಣ ನಿರ್ಮಿಸುವುದು ಎಲ್ಲಾ ಸರ್ಕಾರಗಳ ಜವಾಬ್ದಾರಿ. ಹೀಗಾಗಿ ಈ ನಿರ್ಧಾರವನ್ನು ನಾವು ಅಭಿನಂದಿಸುತ್ತೇವೆ ಎಂದರು.

ಕೇಂದ್ರ ಸರ್ಕಾರದ ಮಟ್ಟದಲ್ಲಿ ತೆಗೆದುಕೊಂಡಿರುವ ಈ ನಿರ್ಧಾರ ಒಂದು ಕಡೆಯಾದರೆ, ಬಿಜೆಪಿ ಪಕ್ಷ ಮಟ್ಟದ ವಿಚಾರದಲ್ಲಿ ಯಾಕೆ ದ್ವಂದ್ವ ನಿಲುವು ತಾಳಲಾಗಿದೆ?. ಸಿಐಡಿಯವರು ಯಡಿಯೂರಪ್ಪ ಹಾಗೂ ಮೂವರು ಸಹಚರರ ವಿರುದ್ಧ 700 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದು, ಇವರು ಸಾಕ್ಷಿನಾಶ, ಪ್ರಕರಣ ಮುಚ್ಚಿಹಾಕುವ ವಿಚಾರ, ಸಂತ್ರಸ್ತ ಬಾಲಕಿ ಹೆಳಿಕೆಗಳನ್ನು ಸೇರಿಸಿ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಸಹಾಯಕ್ಕೆಂದು ಬಂದ ಬಾಲಕಿ ಮೇಲೆ ಇಂತಹ ಕೆಟ್ಟ ಅನುಭವ ಆಗಿರುವ ಪ್ರಕರಣವನ್ನು ಬಹಳ ಹಗುರವಾಗಿ ಪರಿಗಣಿಸಲಾಗಿರುವುದು ದುರ್ದೈವ. ಯಡಿಯೂರಪ್ಪ ಅವರನ್ನು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಯಾಕೆ ಉಳಿಸಿಕೊಂಡಿದ್ದಾರೆ? ಕನಿಷ್ಠಪಕ್ಷ ಬಿಜೆಪಿಯು ಈ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಪಕ್ಷದ ಎಲ್ಲಾ ಹುದ್ದೆಗಳಿಂದ ಅವರನ್ನು ತೆಗೆದುಹಾಕುವ ನಿರ್ಧಾರ ಯಾಕೆ ಮಾಡುತ್ತಿಲ್ಲ? ಮಹಿಳೆಯರ ಪರವಾಗಿ ಅವರ ನಿಲುವೇನು ಎಂದು ಪ್ರಶ್ನಿಸಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!