Ad imageAd image

ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭ : ದಿನೇಶ್ ಗುಂಡೂರಾವ್ 

Bharath Vaibhav
ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭ : ದಿನೇಶ್ ಗುಂಡೂರಾವ್ 
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ ಗಳನ್ನ ಮುಂಬರುವ ಒಂದು ತಿಂಗಳ ಒಳಗಾಗಿ ಪ್ರಾರಂಭಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಕೆ.ಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಕೆ.ಸಿ.ಜನರಲ್ ಆಸ್ಪತ್ರೆಯ ಆವರಣದಲ್ಲಿ ಸುಮಾರು 150 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಮಿ‌ಪೂಜೆ ನೆರವೇರಿಸಿದರು.‌

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಕೆ.ಸಿ ಜನರಲ್ ಆಸ್ಪತ್ರೆಯನ್ನ ಮೇಲ್ದರ್ಜೆಗೇರಿಸಲು ಎಂ.ಸಿ.ಎಚ್ ಆಸ್ಪತ್ರೆ, ಭೋದಕ ಕೊಠಡಿ, ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 150 ಕೋಟಿಯ ಅನುದಾನವನ್ನ ಕೇಳಿದ್ದೆವು.

ಸಿಎಂ ಸಿದ್ದರಾಮಯ್ಯ ಅವರು ನಮ್ಮ ಮನವಿಗೆ ಸ್ಪಂದಿಸಿ, ಅತಿ ಕಡಿಮೆ ಅವಧಿಯಲ್ಲೇ ಅನುದಾನ ಮಂಜೂರು ಮಾಡಿಕೊಟ್ಟಿದ್ದಾರೆ. ಭೂಮಿ ಪೂಜೆ ಕೂಡಾ ನೆರವೇರಿಸಲಾಗಿದೆ. ಇದರ ಸಂಪೂರ್ಣ ಸದುಪಯೋಗ ನಮ್ಮ ಜನಸಾಮಾನ್ಯರಿಗೆ ದೊರೆಯಲಿದೆ ಎಂದರು.‌

ರಾಜ್ಯದಲ್ಲಿ ನಮ್ಮ ಸರ್ಕಾರ ಬಂದ ಬಳಿಕ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ. ಡಯಾಲಿಸಿಸ್ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, 750 ಕ್ಕೂ ಹೆಚ್ಚು ಏಕಬಳಕೆಯ ಡಯಾಲಿಸಿಸ್ ಹೊಸ ಯಂತ್ರಗಳನ್ನ ಅಳವಡಿಸಿದ್ದೇವೆ.

ಸರ್ಕಾರಿ ಆಸ್ಪತ್ರೆಗಳಿಗೆ ಈ ಹಿಂದೆ ಶೇ 30 ರಷ್ಟು ಮಾತ್ರ ಔಷಧಿ ನಿಗಮದಿಂದ ಔಷಧಿಗಳು ಸರಬರಾಜು ಆಗುತ್ತಿದ್ದವು. ಇದೀಗ ಶೇ 70 ರಷ್ಟು ಔಷಧಿಗಳನ್ನ ನಿಗಮದಿಂದ ಖರೀಧಿಸಿ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿದೆ. ಮುಂಬರವ ಕೆಲವೇ ದಿನಗಳಲ್ಲಿ ಶೇ 90 ರಷ್ಟು ಔಷಧಿಗಳು ದೊರಕಿಸುವತ್ತ ಆರೋಗ್ಯ ಇಲಾಖೆ ಹೆಜ್ಜೆಯಿಟ್ಟಿದೆ ಎಂದರು.

ಕ್ಯಾನ್ಸರ್ ರೋಗಿಗಳು ಕಿಮೋಥೆರಪಿಗಾಗಿ ಇಂದು ದೂರದ ನಗರಪ್ರದೇಶದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಬರುವ ಪರಿಸ್ಥಿತಿಯಿದೆ. ಜನರಿಗೆ ಅವರ ಜಿಲ್ಲೆಗಳಲ್ಲಿಯೇ ಕಿಮೋಥೆರಪಿ ಸೇವೆ ಒದಗಿಸುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇ ಕೇರ್ ಸೆಂಟರ್ ಗಳನ್ನ ತೆರೆಯಲಾಗುವುದು. ಮುಂಬರುವ ಒಂದು ತಿಂಗಳ ಒಳಗಾಗಿ ಈ ಸೇವೆ ಲಭ್ಯವಾಗಲಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!