Ad imageAd image

ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ದಿಂಗಾಲೇಶ್ವರ್ ಶ್ರೀ ಘೋಷಣೆ

Bharath Vaibhav
ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ :  ದಿಂಗಾಲೇಶ್ವರ್ ಶ್ರೀ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಈ ಹಿಂದೆ ದಿಂಗಾಲೇಶ್ವರ ಸ್ವಾಮೀಜಿ ಸರಣಿ ಸಭೆ ನಡೆಸಿದ್ದರು. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ದಿಂಗಾಲೇಶ್ವರ ಸ್ವಾಮೀಜಿ, ಈ ವಿಷಯ ತಿಳಿಸಿದರು. ಭಕ್ತರ ಒತ್ತಡದ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಅಸೂಟಿ ಕಣದಲ್ಲಿದ್ದಾರೆ. ಈ ನಡುವೆ ಪಕ್ಷೇತರ ಅಭ್ಯರ್ಥಿಯಾಗಿ ಫಕ್ಕೀರ ದಿಮ್ಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸುತ್ತಿದ್ದು ಚುನಾವಣಾ ಅಖಾಡ ತೀವ್ರ ಕುತೂಹಲ ಮೂಡಿಸಿದೆ.

ಪ್ರಹ್ಲಾದ್ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ. ಅವರ ಆಡಳಿತ ವಿನಾಶಕಾರಿಯಾಗಿದೆ. ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು ಎಂದು ಈ ಹಿಂದೆ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ನೀಡಿದ್ದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!