ಬೆಂಗಳೂರು: ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರ ಮೇಲೆ ಚಪ್ಪಲಿ ಎಸೆದಿರುವ ಅತ್ಯಂತ ಆಘಾತಕಾರಿ ಘಟನೆಗೆ ಖಂಡನಿಯ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ ದೇಶ ತಲೆತಗ್ಗಿಸುವಂತಹ ಕೃತ್ಯ, ಅತ್ಯಂತ ಅಮಾನವೀಯ ಘಟನೆ ಇದಾಗಿದ್ದು ಈ ಕೃತ್ಯವನ್ನು ಖಂಡಿಸುತ್ತೇನೆ. ನ್ಯಾಯಾಲಯ ಹಾಗೂ ನ್ಯಾಯಮೂರ್ತಿಗಳಿಗೆ ಗೌರವ ಸಲ್ಲಿಸುವುದು ದೇಶದ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ, ಸಂವಿಧಾನದಡಿ ಕಾರ್ಯನಿರ್ವಹಿಸುವ ನ್ಯಾಯಾಲಯಕ್ಕೆ ಎಲ್ಲರೂ ತಲೆಬಾಗಬೇಕು, ನ್ಯಾಯಮೂರ್ತಿಗಳೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಅವರಿಗೆ ಅಗೌರವ ತೋರಿಸುವುದು ಸರಿಯಲ್ಲ ಎಂದು ಆಪಾದಿಸಿದರು.
ಇಂತಹ ಸಮಾಜ ಘಾತಕ ಕೆಲಸ ಮಾಡಿದವ ಕಿಡಿಗೇಡಿಗಳಿಗೆ ಶೀಘ್ರದಲ್ಲಿ ಬಂಧಿಸಿ ಕಾನೂನು ಕ್ರಮದಡಿಯಲ್ಲಿ ಶಿಕ್ಷೆ ವಿಧಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಂದು ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ ಅವರು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.
ವರದಿ: ಅಯ್ಯಣ್ಣ ಮಾಸ್ಟರ್




