
ಬೆಳಗಾವಿ: ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ (ಸಿಜೆಐ) ಬಿ.ಆರ್ ಗವಾಯಿ ಅವರತ್ತ ಚಪ್ಪಲಿ ಎಸೆದಿರುವ ಸುದ್ದಿ ತಿಳಿದು ಅತ್ಯಂತ ಆಘಾತವಾಯಿತು. ಇದು ದೇಶ ತಲೆತಗ್ಗಿಸುವಂತಹ ಕೃತ್ಯ, ಅತ್ಯಂತ ಅಮಾನವೀಯ ಘಟನೆ ಇದಾಗಿದ್ದು ಈ ಹೇಯ ಕೃತ್ಯವನ್ನು ಖಂಡಿಸುತ್ತೇನೆ.
ನ್ಯಾಯಾಲಯ ಹಾಗೂ ನ್ಯಾಯಮೂರ್ತಿಗಳಿಗೆ ಗೌರವ ಸಲ್ಲಿಸುವುದು ದೇಶದ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ, ಸಂವಿಧಾನದಡಿ ಕಾರ್ಯನಿರ್ವಹಿಸುವ ನ್ಯಾಯಾಲಯಕ್ಕೆ ಎಲ್ಲರೂ ತಲೆಬಾಗಬೇಕು, ನ್ಯಾಯಮೂರ್ತಿಗಳೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಅವರಿಗೆ ಅಗೌರವ ತೋರಿಸುವುದು ಸರಿಯಲ್ಲ.
ಇಂತಹ ಸಮಾಜಘಾತುಕ ಕೆಲಸ ಮಾಡಿದವರನ್ನು ಆದಷ್ಟು ಬೇಗ ಬಂಧಿಸಿ, ಸರಿಯಾದ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಕರ್ನಾಟಕ ಭೀಮ ರಕ್ಷಕ ಸಂಘಟನೆ ರಾಜ್ಯ ಅಧ್ಯಕ್ಷರಾದ ಈಶ್ವರ ಮಾ ಗುಡಜ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ರಾಜು ಮುಂಡೆ




