ಸಿರುಗುಪ್ಪ : ತಾಲೂಕಿನ ದೇಶನೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಶೇಷ ಚೇತನರಿಗೆ ಮಂಜೂರುಗೊಂಡ 1.22 ಲಕ್ಷ ಮೌಲ್ಯದ ಸಲಕರಣೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ವಿತರಿಸಿದರು.

ನಂತರ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಅದರಲ್ಲೂ ವಿಶೇಷವಾಗಿ ವಿಶೇಷ ಚೇತನರಿಗೆ ಜಲಮಂಗಲ ಕಾರ್ಯಕ್ರಮದಡಿ ವೀಲ್ ಚೇರ್, ಕಮೋಡ್ ಚೇರ್, ಯು ಸೇಫ್ ವಾಕರ್, ತ್ರೀ ಲೆಗ್ ಸ್ಟಿಕ್, ಸಿಂಗಲ್ ಲೆಗ್ ಸ್ಟಿಕ್, ವಾಟರ್ ಬೆಡ್ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು, ತಾಲೂಕಿನಲ್ಲಿ ಈವರೆಗೆ 34 ಲಕ್ಷ ಮೌಲ್ಯದ ಸಲಕರಣೆಗಳನ್ನು ವಿತರಿಸಲಾಗಿದೆ ಎಂದರು.
ಈ ಸಂದರ್ಭ ತಾಲೂಕಿನ ಕ್ಷೇತ್ರ ಯೋಧನಾಧಿಕಾರಿಗಳಾದ ಸುಧೀರ್ ಹಂಗಳೂರು, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಭೀಮಪ್ಪ ಮತ್ತು ಸದಸ್ಯರಾದ ಈಶ್ವರ್, ಕೃಷಿ ಮೇಲ್ವಿಚಾರಕ ವೀರೇಶ್, ವಲಯ ಮೇಲ್ವಿಚಾರಕಿ ಶ್ರೀಮತಿ ಚಂದ್ರಕಲಾ ಸೇವಾ ಪ್ರತಿನಿಧಿಗಳಾದ ಶ್ರೀಮತಿ ನಿಂಗಮ್ಮ, ಶ್ರೀಮತಿ ಲಲಿತ, ಶ್ರೀಮತಿ ಅನಿತಾ ಹಾಗೂ ಊರಿನ ಗಣ್ಯರು ಸಂಘದ ಸದಸ್ಯರು ಉಪಸ್ಥಿತರಿದ್ದರು.
ವರದಿ : ಶ್ರೀನಿವಾಸ ನಾಯ್ಕ




