ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಿರುವ ಪೂರ್ವ ಪ್ರಾಥಮಿಕ ತರಗತಿಗಳ (ಎಲ್ ಕೆಜಿ-ಯುಕೆಜಿ) ಮಕ್ಕಳಿಗೂ ಡಿ.1ರಿಂದ ಬೆಳಗ್ಗೆ ಹಾಲು, ಮಧ್ಯಾಹ್ನ ಬಿಸಿಯೂಟ ಮತ್ತು ಮೊಟ್ಟೆ, ಬಾಳೆಹಣ್ಣು ವಿತರಿಸಲು ಅನುಮತಿ ನೀಡಿ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಸರ್ಕಾರಿ ಶಾಲೆಗಳಲ್ಲಿ ವಿವಿಧ ಯೋಜನೆಗಳಡಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ.




