ಇಲಕಲ್:- ಜಿಲ್ಲಾಡಳಿತದ/ಜಿಲ್ಲಾ SEEVP ಸಮಿತಿ ಹಾಗೂ ಜಿಲ್ಲಾ ಪಂಚಾಯತ್ ಬಾಗಲಕೋಟೆ, ತಾಲೂಕ್ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬಾಗಲಕೋಟೆ ರವರು ಇಳಕಲ್ ತಾಲೂಕ ಪಂಚಾಯತಿಗೆ ಆಗಮಿಸಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರಜಾಪ್ರಭುತ್ವದ ಆಶಯಕ್ಕೆ ಮತದಾನ ಅಡಿಪಾಯವಾಗಿದ್ದು ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಾವೆಲ್ಲರೂ ತಪ್ಪದೇ ಮತದಾನ ಮಾಡೋಣ ಮತದಾನ ಎಂಬುದು ಪ್ರತಿಯೊಬ್ಬ ಅರ್ಹ ಮತದಾರನ ಆದ್ಯ ಕರ್ತವ್ಯವಾಗಿದೆ. ಮತದಾನದ ದಿನದಂದು ಪ್ರತಿಯೊಬ್ಬ ಅರ್ಹ ಮತದಾರನ್ನು ತಮ್ಮ ಹಕ್ಕನ್ನು ಚಲಾಯಿಸಲು ಮುಂದಾಗುವಂತೆ ತಿಳಿಸಿದರು.
ಮತದಾನ ಜಾಗೃತಿ ಮೂಡಿಸುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬಾಗಲಕೋಟೆ ರವರು ಉತ್ತಮ ರಂಗೋಲಿ ಹಾಕಿದ ಸ್ಫರ್ಧಿಗಳಿಗೆ ಪ್ರಥಮ ಸ್ಥಾನ, ದ್ವಿತೀಯ ಹಾಗೂ ತೃತೀಯ ಸ್ಥಾನ ಆಯ್ಕೆ ಮಾಡಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬಾಗಲಕೋಟೆ ಇಳಕಲ್ & ಹುನಗುಂದ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರು ಪ್ರಶಸ್ತಿ ಪತ್ರ ನೀಡಿದರು.
ಜೊತೆಗೆ ಕ್ಯಾಂಡಲ್ ಲೈಟ್ ಮೂಲಕ ಮತದಾನ ಅರಿವು ಮೂಡಿಸಲಾಯಿತು. ಕಾರ್ಯನಿರ್ವಾಹಕ ಅಧಿಕಾರಿಗಳು ಹುನಗುಂದ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ತಾಲೂಕಿನ ಎಲ್ಲಾ ನರೇಗಾ ಸಿಬ್ಬಂದಿಗಳು ಹಾಜರಿದ್ದರು.
ವರದಿ ದಾವಲ್. ಶೇಡಂ