ಬೆಂಗಳೂರು: –ಪೀಣ್ಯ ದಾಸರಹಳ್ಳಿ ರಾಜ್ಯದಿಂದ ಕಳೆದ ಬಾರಿ ಕಾಂಗ್ರೆಸ್ ಒಂದು ಸ್ಥಾನ ಗೆದ್ದಿದ್ದೆವು. ಆದರೆ ಜನ ವಿರೋಧಿ ಬಿಜೆಪಿ ಆಡಳಿತದಿಂದ ಕಂಗೆಟ್ಟ ಮತದಾರರು ರಾಜ್ಯದಲ್ಲಿ ಕಾಂಗ್ರೆಸ್ 9 ಸ್ಥಾನ ಗೆಲ್ಲುವಂತೆ ಮಾಡಿದ್ದಾರೆ. ಬಿಜೆಪಿ ಪಕ್ಷವು ಜೆಡಿಎಸ್ ಜೊತೆ ಮೈತ್ರಿ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷವು ಹೆಚ್ಚು ಸ್ಥಾನ ಗೆಲ್ಲುತ್ತಿತ್ತು. ಹಾಗಾಗಿ ಈ ಫಲಿತಾಂಶವನ್ನು ಬಿಜೆಪಿಯ ಸೋಲು ಎಂದೇ ಭಾವಿಸುತ್ತೇವೆ’, ಎಂದು ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೆಲಗದರನಹಳ್ಳಿ ಪ್ರಭಾವಿ ನಾಯಕ ಭಾಸ್ಕರ್ ಆಚಾರಿ ಹೇಳಿದರು.
ಮಾದ್ಯಮದರೊಂದಿಗೆ ಮಾತನಾಡಿದ ಅವರು, ‘ಈ ಬಾರಿ ಬಿಜೆಪಿ 400 ಸ್ಥಾನ ಗೆದ್ದು ಕಾಂಗ್ರೆಸ್ ಅನ್ನು ಧೂಳೀಪಟ ಮಾಡುತ್ತೇವೆ ಎಂದು ಹೇಳಿದ ಬಿಜೆಪಿ ನಾಯಕರು ಬಿಜೆಪಿ ಬಹುಮತ ಪಡೆಯುವಲ್ಲಿ ವಿಫಲವಾಗಿರು ವುದು ಜನರು ತಕ್ಕ ಪಾಠಲಿಸಿ ದೇಶದಲ್ಲಿ ಇಂಡಿಯಾ ಒಕ್ಕೂಟವು ಜೈ ಎಂದಿದ್ದಾರೆ. ಸರ್ಕಾರ ರಚನೆ ಮಾಡುವ ಸಂಬಂಧ ಹೈಕಮಾಂಡ್ ನಿರ್ಧರಿಸಲಿದೆ. ಕಾರ್ಯಕರ್ತರ ಶ್ರಮದಿಂದ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದೆ’, ಎಂದು ಹೇಳಿದರು.
ಹಾಗೆಯೇ ರಾಜ್ಯದಿಂದ ಆಯ್ಕೆಯಾಗಿರುವ ನೂತನ ಸಂಸದರಿಗೆ ಭಾಸ್ಕರ್ ಆಚಾರಿ ಅಭಿನಂದನೆಗಳು ಹೇಳುವ ಮೂಲಕ ದೇಶದಲ್ಲಿ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸ್ಥಾನ ಗೆಲ್ಲಲು ಕಾರಣೀಭೂತರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ. ಮುಂದಿನ ದಿನಗಳಲ್ಲಿ ಬಹುಮತದಿಂದ ದೇಶದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
‘ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ರಾಜೀವ್ ಗೌಡರವರು ಗೆಲ್ಲುತ್ತಾರೆಂಬ ವಿಶ್ವಾಸವಿತ್ತು. ಆದರೂ ಕೂಡಾ ದಾಸರಹಳ್ಳಿ ಕ್ಷೇತ್ರದಿಂದ ಹೆಚ್ಚಿನ ಮತ ಪಡೆದಿದ್ದೇವೆ. ಇದು ಮುಂದಿನ ಸಲದ ಗೆಲುವಿನ ಮುನ್ಸೂಚನೆಯಂತಿದೆ. ಆರ್ ಮಂಜುನಾಥ್ ರವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಬಂದ ಮೇಲೆ 40,000 ದಿಂದ 75,000ಕ್ಕೆ ಮತಗಳ ಹೆಚ್ಚಳವಾಗಿದ್ದು ಕೂಡಾ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು ಲಾಭವಾಗಿದೆ’, ಎಂದು ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಾಸ್ಕರ್ ಆಚಾರಿ ಬಿ.ವಿ ನ್ಯೂಸ್ ಕನ್ನಡ ಚಾನಲ್ ಗೆ ತಿಳಿಸಿದರು.
ವರದಿ:- ಅಯ್ಯಣ್ಣ ಮಾಸ್ಟರ್