ಧಾರವಾಡ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಧಾರವಾಡ ಇವುಗಳ ಸಹಯೋಗದಲ್ಲಿ ಧಾರವಾಡದ ಸೃಜನಾ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜನತೆ ಕೊಟ್ಟ ಅಹವಾಲುಗಳನ್ನು ಸ್ವೀಕರಿಸಲಾಗಿದ್ದು ಶೀಘ್ರದಲ್ಲಿ ಅವುಗಳನ್ನು ವಿಲೇವಾರಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಸೂಚನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ಸನ್ಮಾನ್ಯ ಶ್ರೀ ಪ್ರಸಾದ್ ಅಬ್ಬಯ್ಯ , ನವಲಗುಂದ ಶಾಸಕರಾದ ಸನ್ಮಾನ್ಯ ಶ್ರೀ ಏನ್ ಎಚ್ ಕೊಣರೆಡ್ಡಿ,ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರೂಪ ಕೆ ಟಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ:ವಿನಾಯಕ ಏನ್