ಧಾರವಾಡ :ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಬೆಳಗಾವಿ, ಗದಗ ಮತ್ತು ಧಾರವಾಡ ಜಿಲ್ಲಾ ಪ್ರವಾಸ.
ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಫೆಬ್ರವರಿ 17 ರಿಂದ 19 ವರೆಗೆ ಬೆಳಗಾವಿ, ಚಿಕ್ಕೋಡಿ, ಗದಗ ಮತ್ತು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಫೆಬ್ರವರಿ 17 ರ ಸೋಮವಾರದಂದು ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸುವ ಅವರು, ಬೆಳಗಾವಿ ನಗರ ಹಾಗೂ ಸದಲಗಾ ಗ್ರಾಮದ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಅವರು ಸಂಜೆ ಧಾರವಾಡಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.
ಫೆಬ್ರವರಿ 18 ರ ಮಂಗಳವಾರದಂದು ಧಾರವಾಡದಿಂದ ಗದಗ ಪಟ್ಟಣಕ್ಕೆ ಆಗಮಿಸಿ, ಬೆಳಿಗ್ಗೆ 10:30 ಗಂಟೆಗೆ ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಕಾರ್ಮಿಕ ಸಂಘಟಣೆಗಳ ಸಭೆ ಜರುಗಿಸುವರು. ನಂತರ ಅವರು ಧಾರವಾಡಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು.
ಫೆಬ್ರವರಿ 19 ರ ಬುಧವಾರದಂದು ಬೆಳಿಗ್ಗೆ 9 ಗಂಟೆಗೆ ಧಾರವಾಡ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಂದು ಸಂಜೆ ಬೆಂಗಳೂರಿಗೆ ಮರುಪ್ರಯಾಣ ಬೆಳೆಸುವರೆಂದು ಸಚಿವರ ಆಪ್ತ ಕಾರ್ಯದರ್ಶಿ ಪಿ.ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ವಿನಾಯಕ ಗುಡ್ಡದಕೇರಿ