ಬೆಳಗಾವಿ: ರಾಜ್ಯ ಸರಕಾರವು ಡಿಸೆಂಬರ್ 31 ರೊಳಗೆ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಚಿಕ್ಕೋಡಿ ಜಿಲ್ಲೆಯನ್ನು ರಚಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಗೆ ಭರವಸೆ ನೀಡಿದ್ದಾರೆ.
ಆಡಳಿತಾತ್ಮಕ ವ್ಯವಹಾರಗಳಲ್ಲಿ ಅನುಕೂಲತೆ ತರಲು ಮತ್ತು ಸರ್ಕಾರದ ಯೋಜನೆಗಳನ್ನು ಜನರಿಗೆ ಸರಿಯಾಗಿ ತಲುಪಿಸಲು ಬೆಳಗಾವಿ ಜಿಲ್ಲೆಯನ್ನು ವಿಭಜಿಸುವುದು ಅಗತ್ಯವಾಗಿದೆ ನಾನು ಕೂಡ ಬೆಳಗಾವಿ ಜಿಲ್ಲಾ ವಿಭಜನೆಯ ಪರವಾಗಿದ್ದೇನೆ.
ಬೆಳಗಾವಿ ಜಿಲ್ಲಾ ವಿಭಜನೆಗೆ ನಾನು ಸಹಮತ ವ್ಯಕ್ತಪಡಿಸುತ್ತೇನೆ ಎಂದು ಸಚಿವೆ ಹೇಳಿಕೆ ನೀಡಿದ್ದಾರೆ.ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಜಿಲ್ಲೆಯನ್ನು ರಚಿಸುವಂತೆ ನಾನು ಸರ್ಕಾರಕ್ಕೆ ಒತ್ತಾಯಿಸಿದ್ದೇನೆ.
ಡಿಸೆಂಬರ್ 31 ರಂದು ಕರ್ನಾಟಕ ಸರ್ಕಾರ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಚಿಕ್ಕೋಡಿ ಜಿಲ್ಲೆಯನ್ನು ರಚಿಸಲಿದೆ ಎಂದು ಸಚಿವೆ ಹೆಬ್ಬಾಳಕರ್ ಮಾಹಿತಿ ನೀಡಿದರು.




