ಬಾಗಲಕೋಟೆ: ರಾಜ್ಯದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಮತ್ತೊಂದು ಹೇಯ ಘಟನೆ ನಡೆದಿದೆ. 40 ವರ್ಷದ ವಿಚ್ಛೇದಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಬಿಟ್ಟು ಹೋಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ನಡೆದಿದೆ.
ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ರಾಷ್ಟ್ರೀಯ ಹೆದ್ದಾರಿ ಬಳಿ ಮಹಿಳೆಯನ್ನು ಬಿಟ್ಟು ಹೋಗಿದ್ದರು. ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಸಂತ್ರಸ್ತೆಯನ್ನು ಹುನಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಜಿಲ್ಲಾಸ್ಪತ್ರೆಯಲ್ಲಿ ಸಂತ್ರಸ್ತೆಗೆ ಚಿಕಿತ್ಸೆ ಮುಂದುವರೆದಿದೆ. ಸಹೋದರಿಯ ಮೇಲಿನ ದೌರ್ಜನ್ಯ ನೆನೆದು ಸಂತ್ರಸ್ತೆಯ ಸಹೋದರ ಕಣ್ಣೀರಿಟ್ಟಿದ್ದಾರೆ.
ದೂರು ನೀಡಿದರೂ ಈವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.




