ಐಪಿಎಲ್ ಸೀಸನ್ 18 ರಲ್ಲಿ ಅರ್ ಸಿಬಿ ತಂಡ ಅದ್ಬುತ ಪ್ರದರ್ಶನ ನೀಡುತ್ತಿದ್ದು, ಆಡಿರುವ 11 ಪಂದ್ಯದಲ್ಲಿ 8 ಅನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅಷ್ಟೇ ಅಲ್ಲದೆ ಈ ಬಾರಿ ಖಂಡಿತವಾಗಿಯು ಕಪ್ ಗೆದ್ದೇ ಗೆಲ್ಲುತ್ತದೆ ಎಂದು ಅಭಿಮಾನಿಗಳು ಭವಿಷ್ಯ ನುಡಿದಿದ್ದಾರೆ.
ಇಡೀ ಪ್ರಪಂಚದಲ್ಲಿ ಅತಿ ಶ್ರೀಮಂತ ಹಾಗೂ ಅತಿ ದೊಡ್ಡ ಕ್ರಿಕೆಟ್ ಲೀಗ್ ಎಂದೇ ಹೆಸರುವಾಸಿಯಾಗಿವ ಇಂಡಿಯಾ ಪ್ರೀಮಿಯರ್ ಲೀಗ್ ನಲ್ಲಿ ಆರ್ ಸಿಬಿಗೆ ಇರುವ ಅಭಿಮಾನಿ ಬಳಗ ಬೇರೆ ಯಾವ ತಂಡಕ್ಕೂ ಇಲ್ಲ, ಇದೀಗ ಅದು ಮತ್ತೊಮ್ಮೆ ಸಾಬೀತಾಗಿದೆ.
ಆರ್ ಸಿಬಿ ಅಭಿಮಾನಿಗಳು ಬಹಳ ನಿಷ್ಟಾವಂತರಾಗಿರುತ್ತಾರೆ, ಇದಕ್ಕೆ ಉದಾಹರಣೆಗಳು ನಮ್ಮ ಕಣ್ಣ ಮುಂದೆಯೇ ಇದೆ. ಇವೆಲ್ಲದರ ನಡುವೆ ಆರ್ ಸಿಬಿ ಈ ಬಾರಿ ಟ್ರೋಫಿ ಗೆಲ್ಲದಿದ್ದರೆ ತಾನು ನನ್ನ ಪತ್ನಿಗೆ ವಿಚ್ಛೇದನ ನೀಡುತ್ತೇನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.
ಪತಿ ಆರ್ ಸಿಬಿ ಗೆಲ್ಲದಿದ್ದರೆ ವಿಚ್ಛೇದನ ನೀಡುವುದಾಗಿ ಓಪನ್ ಚಾಲೆಂಜ್ ಹಾಕುತ್ತಿದ್ದರು ಕೂಡ ಪತ್ನಿ ಏನು ಮಾತನಾಡದೆ ಸುಮ್ಮನೆ ನಿಂತಿದ್ದಳು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.