ಬೆಂಗಳೂರು : ‘2028 ರವರೆಗೆ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ಅವ್ರೇ ಸಿಎಂ ಆಗಿ ಮುಂದುವರೆದರೆ ಏನ್ ತಪ್ಪು’ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಕುರ್ಚಿ ಕದನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ.
‘2028 ರವರೆಗೆ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. 2028ರವರೆಗೆ ಸಿದ್ದರಾಮಯ್ಯ ಸಿಎಂ ಆಗಿದ್ರೆ ಸಂತೋಷ.. ನಾನು ಯಾವುದೇ ಕಾರಣಕ್ಕೂ ಬೇಜಾರು ಮಾಡಿಕೊಳ್ಳೋದಿಲ್ಲ. ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ’ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.




