Ad imageAd image

ಕನ್ನಡದ ವಿಚಾರದಲ್ಲಿ ರಾಜಿಯಾಗಲ್ಲ :ಡಿ.ಕೆ.ಶಿವಕುಮಾರ್

Bharath Vaibhav
ಕನ್ನಡದ ವಿಚಾರದಲ್ಲಿ ರಾಜಿಯಾಗಲ್ಲ :ಡಿ.ಕೆ.ಶಿವಕುಮಾರ್
DKS
WhatsApp Group Join Now
Telegram Group Join Now

ಬೆಂಗಳೂರು :”ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ ವಿಚಾರದಲ್ಲಿ ರಾಜಿಯಾಗದೆ ಕೆಲಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧ ಆವರಣದಲ್ಲಿ ನಡೆದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಅವರ, ಬಸವಣ್ಣನವರ, ಕೆಂಪೇಗೌಡರು ಸೇರಿದಂತೆ ಅನೇಕ ನಾಯಕರ ಪ್ರತಿಮೆಗಳಿವೆ.

ಈ ಶಕ್ತಿ ಕೇಂದ್ರದಲ್ಲಿ ನಾಡ ದೇವಿ ಭುವನೇಶ್ವರಿ ತಾಯಿ ಪ್ರತಿಮೆ ಇರಬೇಕು. ಇಲ್ಲಿಗೆ ಭೇಟಿ ನೀಡುವವರು ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಎಂಬುದು ನಮ್ಮ ಆಶಯ. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿದ್ದು ಈ ನೆನಪಿಗಾಗಿ 25 ಅಡಿಯ ಕಂಚಿನ ಪ್ರತಿಮೆ ಸ್ಥಾಪಿಸಲಾಗುತ್ತಿದೆ” ಎಂದರು.

“ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ” ಎಂದು ಹೇಳಿದರು.

“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!