ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.
ಚಾಮುಂಡಿ ದೇವಿಯ ದರ್ಶನ ದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಯಾವುದೇ ಪ್ರಯತ್ನಗಳು ವಿಫಲವಾದರೂ ನಮ್ಮ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದಿದ್ದಾರೆ.ಇದೇ ವೇಳೆ ಚಾಮುಂಡಿ ಬೆಟ್ಟದಲ್ಲಿ ರಾಜಕೀಯ ಚರ್ಚೆ ಬೇಡ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಡಿಕೆಶಿ ನನ್ನ ಮುಂದೆ ಆಯ್ಕೆಗಳಿಲ್ಲ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಬುದ್ದಿವಾದ ಹೇಳಿದ್ದಾರೆ. ಹೈಕಮಾಂಡ್ ಕೂಡಾ ಕೆಲ ವಿಚಾರ ಹೇಳಿದೆ ಎಂದು ತಿಳಿಸಿದರು.