ಬೆಂಗಳೂರು: ತುಂಗಭದ್ರಾ ಸೇರಿ ರಾಜ್ಯದ ಎಲ್ಲಾ ಅಣೆಕಟ್ಟೆಗಳ ಗೇಟುಗಳನ್ನು ಬದಲಾವಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ತುಂಗಭದ್ರಾ ನೀರಿನ ವಿಚಾರವಾಗಿ ಬೆಳಗ್ಗೆ ಸಭೆ ನಡೆಯಿತು. ಸಭೆಯಲ್ಲಿ ತುಂಗಭದ್ರಾ ಸೇರಿ ಎಲ್ಲಾ ಅಣೆಕಟ್ಟೆಗಳ ಗೇಟುಗಳನ್ನು ಬದಲಾಯಿಸಲು ತೀಮಾನಿಸಲಾಗಿದೆ.
ರೈತರು ನಮಗೆ ಒಂದು ಬೆಳೆ ನಷ್ಟವಾಗುತ್ತದೆ ಎಂದು ಹೇಳುತ್ತಿದ್ದರು. ಆಗ ಅವರಿಗೆ ಒಂದು ಬೆಳೆ ಮುಖ್ಯವೋ ಅಥವಾ ಅಣೆಕಟ್ಟು ಮುಖ್ಯವೋ ಎಂದು ಹೇಳಿದೆ. ಕೆಲವರು ಈ ವಿಚಾರದಲ್ಲಿ ರಾಜಕೀಯ ಮಾಡಲು ಪ್ರಯತ್ನಿಸಿದರು.
ರಾಜಕಾರಣ ಮಾಡುವುದಾದರೆ ಇಲ್ಲಿಗೆ ಬರಬೇಡಿ ಎಂದು ಹೇಳಿದೆ. ನನ್ನ ಸ್ಥಾನದಲ್ಲಿ ಕೂತು ಆಲೋಚಿಸಿ ಎಂದಾಗ ಅವರು ಒಪ್ಪಿದರು ಎಂದರು. ಅಣೆಕಟ್ಟಿನಲ್ಲಿ ಹೂಳು ತಂಬಿ 28 ಟಿಎಂಸಿ ನೀರು ನಷ್ಟವಾಗುತ್ತಿದೆ.
ಇದಕ್ಕೆ ಪರ್ಯಾಯ ಯೋಜನೆ ರೂಪಿಸುವ ಬಗ್ಗೆ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಐದು ಬಾರಿ ಕರೆ ಮಾಡಿ ಸಭೆಗೆ ಸಮಯ ನಿಗದಿ ಮಾಡುವಂತೆ ಕೋರಿದ್ದೇನೆ. ಆದರೆ ಅವರಿಗೆ ಹೆಚ್ಚಿನ ನೀರು ಸಿಗುತ್ತಿದೆ ಎಂದು ಇದರ ಬಗ್ಗೆ ಆಸಕ್ತಿ ತೋರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.




