Ad imageAd image

ಯಾವದೋ ವಿಚಾರ ಮಾತನಾಡುವ ಬದಲು ಮಹದಾಯಿ ಯೋಜನೆಗೆ ಅನುಮತಿ ಕೊಡಿಸಿ : ಡಿ. ಕೆ ಶಿವಕುಮಾರ್ 

Bharath Vaibhav
ಯಾವದೋ ವಿಚಾರ ಮಾತನಾಡುವ ಬದಲು ಮಹದಾಯಿ ಯೋಜನೆಗೆ ಅನುಮತಿ ಕೊಡಿಸಿ : ಡಿ. ಕೆ ಶಿವಕುಮಾರ್ 
DKS
WhatsApp Group Join Now
Telegram Group Join Now

ಬೆಂಗಳೂರು : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕಾಂಗ್ರೆಸ್ ಬಗ್ಗೆ ಆರೋಪಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಯಾವದೋ ವಿಚಾರ ಮಾತನಾಡುವ ಬದಲು ಮಹದಾಯಿ ಯೋಜನೆಯ ಅನುಮತಿ ಕೊಡಿಸಿ ನಿಮಗೆ ಇಲ್ಲಿಂದಲೇ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ಸಿನವರು ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚಿ ಹಾಕಲು ದರ್ಶನ್ ಫೋಟೋ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದರು.

ಇದೀಗ ಈ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿದ್ದು, ನೀವು ಯಾವ್ಯಾವ್ದೋ ವಿಚಾರವನ್ನು ಮಾತನಾಡುವ ಬದಲು ಮಹದಾಯಿ ಯೋಜನೆಗೆ ಕೇಂದ್ರ ಅನುಮತಿ ನೀಡಿಲ್ಲ, ಇದರಿಂದ ಕರ್ನಾಟಕಕ್ಕೆ ಸಾಕಷ್ಟು ಅನ್ಯಾಯವಾಗಿದೆ. ದಯವಿಟ್ಟು ಆ ಯೋಜನೆಗೆ ಅನುಮತಿ ಕೊಡಿಸಿ ನಿಮಗೆ ಇಲ್ಲಿಂದಲೇ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ ಎಂದರು.

ಇದೇ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರಗಾಲ ಸಂಭವಿಸುತ್ತದೆ ಎಂಬ ಹೇಳಿಕೆಗೆ ಸಂಬಂಧಪಟ್ಟಂತೆ ಮಾತನಾಡಿದ್ದು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗ ಉತ್ತಮ ಮಳೆಯಾಗಿದೆ. ಕೆರೆಗಳೆಲ್ಲ ತುಂಬಿ ಜೀವಕಳೆ ಬಂದಿದೆ ಎಂದು ಡಿಕೆ ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!