Ad imageAd image

ಡಿ.ಕೆ. ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ

Bharath Vaibhav
ಡಿ.ಕೆ. ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ
DKS
WhatsApp Group Join Now
Telegram Group Join Now

ನವದೆಹಲಿ : ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೇಶದ ಎರಡನೇ ಶ್ರೀಮಂತ ಸಚಿವ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್  ವರದಿ ಹೇಳಿದೆ.

ರಾಜ್ಯ ವಿಧಾನಸಭೆಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವರು ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ ಎಡಿಆರ್ ಗುರುವಾರ ವರದಿ ಬಿಡುಗಡೆ ಮಾಡಿದೆ.

27 ವಿಧಾನಸಭೆಗಳು, 3 ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರದ 652 ಸಚಿವರ ಪೈಕಿ 643 ಸಚಿವರ ಅಫಿಡವಿಟ್‌ಗಳನ್ನು ವಿಶ್ಲೇಷಿಸಲಾಗಿದೆ. ಕರ್ನಾಟಕದಲ್ಲಿ ನೂರು ಕೋಟಿಗಿಂತ ಹೆಚ್ಚು ಆಸ್ತಿ ಇರುವ ಎಂಟು ಸಚಿವರು ಇದ್ದಾರೆ. ಆಂಧ್ರ ಪ್ರದೇಶವು ನಂತರದ ಸ್ಥಾನದಲ್ಲಿದೆ.

643 ಸಚಿವರ ಪೈಕಿ 302 ಮಂದಿ (47%) ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. 174 ಸಚಿವರ ವಿರುದ್ಧ (27%) ಗಂಭೀರ ಅಪರಾಧ ಪ್ರಕರಣಗಳಿವೆ.

ಈ ಸಚಿವರು ಕೊಲೆ, ಕೊಲೆಯತ್ನ, ಅಪಹರಣ, ಮಹಿಳೆಯರ ವಿರುದ್ಧದ ಅಪರಾಧಗಳು ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಕೇಂದ್ರ ಸಚಿವ ಸಂಪುಟದ 72ರಲ್ಲಿ 29 (40%) ಮಂದಿ ವಿರುದ್ಧ ಪ್ರಕರಣಗಳಿವೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!