Ad imageAd image

ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ : ಡಿ. ಕೆ ಶಿವಕುಮಾರ್ 

Bharath Vaibhav
ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ : ಡಿ. ಕೆ ಶಿವಕುಮಾರ್ 
DKS
WhatsApp Group Join Now
Telegram Group Join Now

ಬೆಂಗಳೂರು: ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು.ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಜಾಗೃತವಾಗಿ ಕೆಲಸ ಮಾಡಬೇಕಿದೆ.

ಮುಖ್ಯಮಂತ್ರಿಗಳು ಈ ವಿಚಾರ ತಿಳಿದ ಕೂಡಲೇ ತಕ್ಷಣವೇ ರಾಜ್ಯ ಸರ್ಕಾರದ ಪರವಾಗಿ ಸಚಿವ ಸಂತೋಷ ಲಾಡ್ ಅವರ ಮುಖಂಡತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದು ತಿಳಿಸಿದರು.

ದರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಕೆಟ್ಟ ಬೆಳವಣಿಗೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು.

ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಹೇಳಿದರು.

ಈ ಘಟನೆ ವಿದೇಶಾಂಗ ನೀತಿಯಿಂದ ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದು, ಮೃತರ ಕುಟುಂಬದವರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ ಎಂದರು.

ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಈ ವಿಚಾರವನ್ನು ಚರ್ಚಿಸಬೇಕು. ದೇಶವನ್ನು ರಕ್ಷಣೆ ಮಾಡುವುದು ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article
error: Content is protected !!