ನವದೆಹಲಿ : ಡಿಸಿಎಂ ಡಿಕೆಶಿ ನವದೆಹಲಿಯಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿದ್ದು, ರಾಜ್ಯದ ನೀರಾವರಿ ಯೋಜನೆಗಳ ಸಂಬಂಧ ಮಹತ್ವದ ಚರ್ಚೆ ನಡೆಸಿದ್ದಾರೆ.
ಪ್ರಮುಖವಾಗಿ ಈ ಹಿಂದೆ ಘೋಷಿಸಲಾಗಿರುವ ಅನುದಾನ ಹಾಗೂ ಮಹದಾಯಿ, ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಿಆರ್ ಪಾಟೀಲ್ ಜತೆ ಸಮಾಲೋಚನೆ ನಡೆದಿದೆ.ಈ ವೇಳೆ ಸಚಿವ ಸೋಮಣ್ಣ ಹಾಜರಿದ್ದರು.
ಇನ್ನು , ಸಂಜೆ ಕಾಂಗ್ರೆಸ್ ಹೈ ಕಮಾಂಡ್ ಅನ್ನ ಡಿಕೆಶಿ ಭೇಟಿಯಾಗಲಿದ್ದು , ಪ್ರಸ್ತುತ ಕಾಂಗ್ರೆಸ್ ಒಳಜಗಳ ಹಾಗೂ ಸಿಎಂ ಆಪ್ತ ಸಚಿವರ ಕಾರ್ಯವೈಖರಿ ಬಗ್ಗೆಯೂ ಸುದೀರ್ಘ ಮಾತುಕತೆ ನಡೆಯಲಿದೆ ಎನ್ನಲಾಗಿದೆ.
ಡಿಕೆಶಿ ಏಕಾಏಕಿ ದಿಲ್ಲಿಗೆ ಪ್ರಯಾಣ ಬೆಳೆಸಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇಲಾಖೆ ಕೆಲಸದ ಜತೆ ರಾಜಕೀಯ ತಂತ್ರಗಾರಿಕೆ ಮಾಡಲು ಡಿಕೆಶಿ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾತು ಜೋರಾಗಿಯೇ ಕೇಳಿಬರುತ್ತಿದೆ.