ಬಾಗಲಕೋಟೆ: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ, ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗೇ ಆಗುತ್ತಾರೆ ಎಂದು ಬಾಗಲಕೋಟೆಯ ಜ್ಯೋತಿಷಿ ಓರ್ವರು ಭವಿಷ್ಯ ನುಡಿದಿದ್ದಾರೆ.
ಬಾಗಲಕೋಟೆಯ ನವನಗರದ ಖ್ಯಾತ ಜೋತಿಷಿ ಉಲ್ಲಾಸ್ ಜೋಶಿ, ಜನವರಿ 15ರೊಳಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗುವುದು ನಿಶ್ಚಿತ ಎಂದು ಹೇಳಿದ್ದಾರೆ. ನನ್ನ ಬಳಿ ಹಲವರು ಭವಿಷ್ಯ ಕೇಳುತ್ತಾರೆ. ಈವರೆಗೆ ನಾನು ಹೇಳಿದ ಜ್ಯೋತಿಷ್ಯ ಸುಳ್ಳಾಗಿಲ್ಲ ಎಂದು ಉಲ್ಲಾಸ್ ಜೋಶಿ ತಿಳಿಸಿದ್ದಾರೆ.




