Ad imageAd image

ಅನ್ನಭಾಗ್ಯ ಅಕ್ಕಿ ಹಣ ಹಾಗೂ ಗೃಹಲಕ್ಷ್ಮಿ ಹಣ ಬಂದಿಲ್ಲ, ಶೀಘ್ರವೇ ಹಾಕುತ್ತೇವೆ : ಡಿಕೆ ಶಿವಕುಮಾರ್ 

Bharath Vaibhav
ಅನ್ನಭಾಗ್ಯ ಅಕ್ಕಿ ಹಣ ಹಾಗೂ ಗೃಹಲಕ್ಷ್ಮಿ ಹಣ ಬಂದಿಲ್ಲ, ಶೀಘ್ರವೇ ಹಾಕುತ್ತೇವೆ : ಡಿಕೆ ಶಿವಕುಮಾರ್ 
DKS
WhatsApp Group Join Now
Telegram Group Join Now

ಬೆಂಗಳೂರು : ಗ್ಯಾರೆಂಟಿ ಯೋಜನೆಗಳ ಬಲದ ಮೇಲೆ ಅಧಿಕಾರಕ್ಕೇರಿದ ಕಾಂಗ್ರೆಸ್ ಕೊಟ್ಟ ಮಾತು ಉಳಿಸಿಕೊಳ್ಳಲು ಹೆಣಗಾಡುತ್ತಿದೆ.

ಅನ್ನಭಾಗ್ಯ ಅಕ್ಕಿ ಬದಲು ಹಣ, ಗೃಹಲಕ್ಷ್ಮಿ ಯೋಜನೆಯ ಹಣ ಸೇರಿದಂತೆ ಹಲವು ಯೋಜನೆಯ ಹಣ ಕೆಲವು ತಿಂಗಳಿಂದ ಫಲಾನುಭವಿಗಳೀಗೆ ಸಿಗದೇ ಜನ ಆಕ್ರೋಶಗೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಕೆಲವು ತಿಂಗಳಿಂದ ಅನ್ನಭಾಗ್ಯ ಅಕ್ಕಿ ಹಣ ಹಾಗೂ ಗೃಹಲಕ್ಷ್ಮಿ ಹಣ ಬಂದಿಲ್ಲ.. ಮೂರು ತಿಂಗಳಿಂದ ಹಣ ಬಂದಿಲ್ಲ ಎಂದು ತಿಳಿದಿದೆ. ಈ ಹಣವನ್ನು ನಾವು ಹಾಕುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ” ಎಂದು ಹೇಳಿದ್ರು.

ಇನ್ನು ಎಐಸಿಸಿಯನ್ನು ನೀವು ದುರ್ಬಳಕೆ ಮಾಡಿಕೊಳ್ಳುತ್ತಿದ್ದೀರಿ ಎಂದು ರಾಜಣ್ಣ ಹೇಳಿದ್ದಾರೆ ಎಂದು ಕೇಳಿದಾಗ, “ಈಗ ಚರ್ಚೆ ಬೇಡ, ನಾನು ಪಕ್ಷದ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೇರಳಕ್ಕೆ ಹೋಗುತ್ತಿದ್ದೇನೆ.

ನಂತರ ರಾಜಸ್ಥಾನದಲ್ಲಿ ಸಚಿವರುಗಳ ಸಭೆ ಇದ್ದು, ಅಧಿಕಾರಿಗಳ ಸಮೇತ ಪ್ರಯಾಣ ಮಾಡುತ್ತಿದ್ದೇನೆ. ಅಲ್ಲಿಂದ ಬಂದ ನಂತರ ಮಾತನಾಡುತ್ತೇನೆ” ಎಂದು ತಿಳಿಸಿದರು.

WhatsApp Group Join Now
Telegram Group Join Now
Share This Article
error: Content is protected !!