ಮಂಡ್ಯ : 2028 ರಲ್ಲಿ ಸಿಎಂ ಆಗುವ ಆಸೆ ಡಿ.ಕೆ. ಶಿವಕುಮಾರ್ ಅವರಿಗೆ ಕನಸಷ್ಟೇ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಭಾನುವಾರ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಬೆಂಬಲಿಸುವವರು ಯಾರಿದ್ದಾರೆ ಎಂದು ಪ್ರಶ್ನಿಸಿದರು.
ನಮ್ಮ ಕೈಯಲ್ಲಿ ಏನೂ ಇಲ್ಲ. ಎಲ್ಲವೂ ಭಗವಂತನ ಕೈಲಿದೆ ಎಂದು ಹೇಳಿದ ಎಚ್‌ಡಿಕೆ ಮುಂದೇನು ನಡೆಯುವುದೋ ಕಾದು ನೋಡೋಣ ಎಂದರು.
ಬೆಂಗಳೂರಿನಲ್ಲಿ ರೋಡ್ ಟನಲ್ ನಿರ್ಮಾಣ ವಿಚಾರವಾಗಿ ಮಾತನಾಡಿದ ಅವರು, ಬೆಂಗಳೂರು ಮಾತ್ರ ಯಾಕೆ . ಇಡೀ ರಾಜ್ಯಕ್ಕೆ ನಿರ್ಮಿಸಲಿ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ದ ಬೀದಿಬೀದಿಯಲ್ಲಿ ಹೋರಾಟ ನಡೆಸುತ್ತೇವೆ ಎಂದು ಎಚ.ಡಿ. ಕುಮಾರಸ್ವಾಮಿ ಹೇಳಿದ್ದಾರೆ.




