Ad imageAd image

ಡಿಕೆ ಶಿವಕುಮಾರ್ ಮನೆಯಲ್ಲೇ ಪೆನ್ ಡ್ರೈವ್ ಟ್ರಾನ್ಸ್ ಫರ್ ನಡೆದಿದೆ : ಕುಮಾರಸ್ವಾಮಿ ಹೊಸ ಬಾಂಬ್ 

Bharath Vaibhav
ಡಿಕೆ ಶಿವಕುಮಾರ್ ಮನೆಯಲ್ಲೇ ಪೆನ್ ಡ್ರೈವ್ ಟ್ರಾನ್ಸ್ ಫರ್ ನಡೆದಿದೆ : ಕುಮಾರಸ್ವಾಮಿ ಹೊಸ ಬಾಂಬ್ 
HDK DKS
WhatsApp Group Join Now
Telegram Group Join Now

ಮೈಸೂರು : ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲೇ ಪೆನ್ ಡ್ರೈವ್ ಟ್ರಾನ್ಸ್ ಫರ್ ನಡೆದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಪೆನ್ಡ್ರೈವ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್ ಕೈವಾಡ ಇದೆ. ಹಾಸನದ ಕಾಂಗ್ರೆಸ್ ಅಭ್ಯರ್ಥಿ ಹೊಳೆನರಸೀಪುರದಲ್ಲಿ ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಡಿ.ಕೆ.ಸುರೇಶ್, ಡಿಕೆ ಶಿವಕುಮಾರ್ ಬಳಿ ಹೋಗಿದ್ದಾನೆ.

ಡಿಕೆಶಿ ಮನೆಯಲ್ಲಿ ಪೆನ್ಡ್ರೈವ್ನ ಟ್ರಾನ್ಸ್ ಫರ್ ಮಾಡಿಕೊಂಡಿದ್ದಾನೆ. ಸಮಯ ಬಂದಾಗ ತೋರಿಸೋಣ ಅಂತ ಕಳಿಸಿದ್ದಾರೆ ಎಂದು ಹೆಚ್ಡಿಕೆ ಹೇಳಿದ್ದಾರೆ.

ದೇವರಾಜೇಗೌಡ, ಶಿವರಾಮೇಗೌಡ, ಡಿಕೆ ಶಿವಕುಮಾರ್ ಪೆನ್ ಡ್ರೈವ್ ವಿತರಣೆ ಹಿಂದೆ ಇದ್ದಾರೆ. ನಾನು ಪ್ರಜ್ವಲ್ ಪರವಾಗಿ ಇಲ್ಲ. ಆತನ ಅಪರಾಧ ಸಾಬೀತಾದರೆ ಶಿಕ್ಷೆ ಕೊಡಿ. ಈ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸಿ ಎಂದು ಹೆಚ್ಡಿಕೆ ಹೇಳಿದ್ದಾರೆ.

ಪೆನ್ಡ್ರೈವ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್ ಕೈವಾಡ ಇದೆ, ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸರಿಯಾದ ತನಿಖೆ ನಡೆಸದೇ ಇದ್ರೆ ಕಾನೂನು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!