Ad imageAd image

ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ : ಡಿ.ಕೆ ಸುರೇಶ್ 

Bharath Vaibhav
ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ : ಡಿ.ಕೆ ಸುರೇಶ್ 
WhatsApp Group Join Now
Telegram Group Join Now

ಬೆಂಗಳೂರು : ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.ನೀವು ಶಸ್ತ್ರತ್ಯಾಗ ಮಾಡಿದ್ದೀರಾ ಎಂದು ಕೇಳಿದಾಗ, “ತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ ಹೇಳಿದ್ದೆ. ಶಸ್ತ್ರವೇ ಇಲ್ಲದಿದ್ದಾಗ ಶಸ್ತ್ರತ್ಯಾಗದ ಪ್ರಶ್ನೆಯೇ ಬಾರದು” ಎಂದು ಕೇಳಿದರು.

ತಾಳ್ಮೆಯ ಅಸ್ತ್ರ ಇದೆ ಎಂದಿದ್ದೀರಿ ಎಂದಾಗ, “ಈಗಲೂ ತಾಳ್ಮೆ ಇರಲಿ ಎಂದು ಹೇಳುತ್ತಿದ್ದೇನೆ” ಎಂದರು.ಶಸ್ತ್ರ, ತಂತ್ರ, ಯುದ್ಧ ಇಲ್ಲದೇ ಬಗೆಹರಿಯುವುದೇ ಎಂದಾಗ, “ಇದು ರಾಜಕಾರಣ. ಇಲ್ಲಿ ಶಸ್ತ್ರ ಹಾಗೂ ಅಸ್ತ್ರ ಬೇಕಾಗಿಲ್ಲ” ಎಂದರು.

ಶಾಸಕರ ದೆಹಲಿ ಯಾತ್ರೆ ವಿಚಾರ ನನಗೆ ಗೊತ್ತಿಲ್ಲ

ಶಾಸಕರು ದೆಹಲಿಗೆ ತೆರಳಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ನಾಯಕರನ್ನು ಕೇಳುವ ಬಗ್ಗೆ ಪ್ರಶ್ನಿಸಿದಾಗ, “ಶಾಸಕರು ದೆಹಲಿಗೆ ಹೋಗುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಶಾಸಕರನ್ನೇ ಕೇಳಿ” ಎಂದರು.

ಭೋಜನಕೂಟ ಸೇರಿದ ಶಾಸಕರು ನಾಯಕತ್ವದ ವಿಚಾರದಲ್ಲಿ ಸ್ಪಷ್ಟನೆ ಕೇಳಿದ್ದಾರೆ ಎಂದಾಗ, “ನಾನು ಊರಲ್ಲಿ ಇರಲಿಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಅವರು ಯಾವ ತೀರ್ಮಾನ ಕೈಗೊಂಡಿದ್ದಾರೆ, ಯಾವ ಹೇಳಿಕೆ ಕೊಟ್ಟಿದ್ದಾರೆ ಎಂಬುದೂ ಗೊತ್ತಿಲ್ಲ. ಇದು ಅವರ ವೈಯಕ್ತಿಕ ವಿಚಾರ. ಪಕ್ಷ ಅದನ್ನು ಗಮನಿಸಲಿದೆ” ಎಂದು ತಿಳಿಸಿದರು.

ಹೀಗೆ ಆದರೆ 2028ರ ಚುನಾವಣೆ ಪಕ್ಷಕ್ಕೆ ಕಷ್ಟವಾಗಲಿದೆ ಎಂದಾಗ, “ಚುನಾವಣೆಗೆ ಸ್ಪರ್ಧಿಸುವವರಿಗೆ ಕಷ್ಟವಾಗಬಹುದು. ನನಗೆ ಕಷ್ಟ ಆಗುವುದಿಲ್ಲ. ಈ ಬಗ್ಗೆ ನಾನೇಗೆ ಹೇಳಲಿ” ಎಂದು ತಿಳಿಸಿದರು.

ಶಾಸಕರ ಆಗ್ರಹದಲ್ಲಿ ನ್ಯಾಯ ಇದೆ ಅಲ್ಲವೇ ಎಂದು ಕೇಳಿದಾಗ, “ಶಾಸಕರ ವಿಚಾರಧಾರೆ ಅವರಿಗೆ ಹಾಗೂ ಸಂಬಂಧಿಸಿದ್ದೇ ಹೊರತು, ನನಗಲ್ಲ. ಪಕ್ಷ ಅವರ ವಿಚಾರಗಳನ್ನು ಗಮನಿಸಲಿದೆ. ನಾವು ಆ ವಿಚಾರದಲ್ಲಿ ಹೇಳಲು ಬರುವುದಿಲ್ಲ” ಎಂದರು.

ಶಿವಕುಮಾರ್ ಅವರು ಪಕ್ಷ ನನ್ನನ್ನು ಗಮನಿಸಲಿದೆ ಎಂದು ಹೇಳುತ್ತಲೇ ಇದ್ದಾರೆ ಎಂದಾಗ, “ಎಲ್ಲದಕ್ಕೂ ತಾಳ್ಮೆ ಇರಲಿ” ಎಂದರು.

ಸಿದ್ದರಾಮಯ್ಯ ಅವರನ್ನು ಬದಲಿಸುವುದಾದರೆ ದಲಿತ ಸಿಎಂ ಮಾಡಬೇಕು ಎಂಬ ಹೆಚ್.ಸಿ ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಎಲ್ಲರಿಗೂ ಆಸೆ ಇದೆ. ಇದರಲ್ಲಿ ತಪ್ಪೇನಿಲ್ಲ” ಎಂದರು.

ನಿಮ್ಮ ಸಹೋದರರನ್ನು ಸಿಎಂ ಹುದ್ದೆಯಲ್ಲಿ ಕೂರಿಸಲು ನಿಮ್ಮ ಪ್ರಯತ್ನ ಹೇಗಿದೆ, ನಿಮ್ಮ ಬಳಿ ಶಾಸಕರ ಸಂಖ್ಯೆ ಹೆಚ್ಚಾಗಿದೆಯೇ ಎಂದು ಕೇಳಿದಾಗ, “ನನಗೆ ಆ ಬಗ್ಗೆ ಗೊತ್ತಿಲ್ಲ. ಶಾಸಕರ ವಿಚಾರ ಬಿಟ್ಟು ಬಮೂಲ್ ವಿಚಾರ ಏನಾದರೂ ಇದ್ದರೆ ಕೇಳಿ, ಪ್ರತಿಕ್ರಿಯೆ ನೀಡುವೆ’ ಎಂದರು.

 

 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!