ಹಸೆಮಣೆ ಏರಲಿದ್ದಾರೆ ತೇಜಸ್ವಿ ಸೂರ್ಯ : ಹುಡುಗಿ ಯಾರು ಗೊತ್ತಾ..?! 

Bharath Vaibhav
ಹಸೆಮಣೆ ಏರಲಿದ್ದಾರೆ ತೇಜಸ್ವಿ ಸೂರ್ಯ : ಹುಡುಗಿ ಯಾರು ಗೊತ್ತಾ..?! 
WhatsApp Group Join Now
Telegram Group Join Now

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಮುಂದಿನ ಮಾರ್ಚ್‌ 4ರಂದು ಹಸಮಣೆ ಏರಲಿದ್ದಾರೆ.ತೇಜಸ್ವಿ ಸೂರ್ಯಗೆ ಮದುವೆ ಬಗ್ಗೆ ಕೇಳಿದ್ದರೂ ಅವರು ಈ ವಿಚಾರದ ಬಗ್ಗೆ ಬಾಯ್ಬಿಟ್ಟಿರಲಿಲ್ಲ, ಆದರೀಗ ಸದ್ದಿಲ್ಲದೇ, ಹಸೆಮಣೆ ಏರಲು ಸಿದ್ಧತೆ ನಡೆಸಿದ್ದಾರೆ.

ಚೆನ್ನೈ ಮೂಲದ ಗಾಯಕಿ ಸಿವಶ್ರೀ ಅವರನ್ನು ತೇಜಸ್ವಿ ಸೂರ್ಯ ವರಿಸಲಿದ್ದಾರೆ. ಈಗಾಗಲೇ ಎರಡೂ ಕುಟುಂಬಗಳು ಈ ವಿವಾಹಕ್ಕೆ ಒಪ್ಪಿಗೆ ನೀಡಿದ್ದು, ಮಾರ್ಚ್ 4ಕ್ಕೆ ವಿವಾಹ ನಡೆಯಲಿದೆ.

ಸೀವಶ್ರಿ ಮೂಲತಃ ಚೆನ್ನೈ ಅವರಾಗಿದ್ದು, ಶಾಸ್ತ್ರೀಯ ಸಂಗೀತ ಗಾಯಕಿ, ಭರತನಾಟ್ಯ ಕಲಾವಿದೆಯಾಗಿದ್ದಾರೆ. ಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಬಿಟೆಕ್ ಪದವಿ ಪಡೆದಿದ್ದಾರೆ.

ಇದರ ಜೊತೆಗೆ ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಎಂಎ ಪದವಿ, ಮದ್ರಾಸ್ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಎಂಎ ಪದವಿ ಪಡೆದು ಕೊಂಡಿದ್ದಾರೆ.

ಯೂಟ್ಯೂಬ್‌ನಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಫಾಲೋವರ್ಸ್‌ಗಳನ್ನು ಹೊಂದಿರುವ ಸಿವಶ್ರೀ ಸ್ಕಂದಕುಮಾರ್ ಕಳೆದ ಜನವರಿಯಲ್ಲಿ ರಾಮನವಮಿ ಸಂದರ್ಭದಲ್ಲಿ ಕನ್ನಡದ ಭಕ್ತಿಗೀತೆಯಾದ ಪೂಜಿಸಲೆಂದೇ ಹೂಗಳ ತಂದೆ ಹಾಡನ್ನು ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಹಾಡಿದ್ದರು. ಈ ಹಾಡಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಟ್ವಿಟ್ಟರ್‌ನಲ್ಲಿ ವೀಡಿಯೋ ಲಿಂಕ್ ಶೇರ್ ಮಾಡಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!