ಐಗಳಿ : ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ಹಾನಿಯಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ರಕ್ಷಣೆಗೆ ಮುಂದಾಗಿ ಸೂಕ್ತ ಪರಿಹಾರ ನೀಡಬೇಕು ಎಂದು ಜನತಾದಳದ ರಾಜ್ಯ ಉಪಾಧ್ಯಕ್ಷ ಹಾಗೂ ಅಥಣಿ ಮಾಜಿ ಶಾಸಕ ಶಹಜಹಾನ್ ಡೊಂಗರಗಾಂವ ಅವರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.
ಅವರು ಗುರುವಾರ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು-ನಾಲ್ಕು ತಿಂಗಳಿAದ ಸತತ ಧಾರಾಕಾರ ಮಳೆಯಾಗುತ್ತಿದ್ದರಿಂದ ಮುಂಗಾರು ಬೆಳೆಗಳಾದ ಉದ್ದು, ಹೆಸರು, ಸೋಯಾಬೀನ್, ಮೆಕ್ಕೆಜೋಳ ಅಲ್ಲದೆ ತಾಲೂಕಿನಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ ತೊಗರಿ ಬೆಳೆ ಕೂಡ ನಷ್ಟವಾಗಿದೆ. ಅಧಿಕಾರಿಗಳ ನಿರ್ಲಕ್ಷö್ಯದಿಂದ ಹಾನಿಯಾದ ಬೆಳೆಗಳ ಸರ್ವೆ ಮಾಡದೇ ಇನ್ನು ರೈತರ ಹೊಲದಲ್ಲಿ ಹಾನಿಯಾದ ಬಗ್ಗೆ ಅಧಿಕಾರಿಗಳು ಮಾಹಿತಿಯನ್ನು ಪಡೆದುಕೊಂಡಿರುವುದಿಲ್ಲ. ಅಧಿಕಾರಿಗಳು ಕೂಡಲೇ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಅತಿವೃಷ್ಠಿಯಿಂದ ಹಾನಿಯಾದ ಬೆಳೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಸರ್ಕಾರಕ್ಕೆ ಮಾಹಿತಿ ನೀಡುವಂತಾಗಬೇಕು. ಈಗಾಗಲೇ ರೈತರು ಬಿತ್ತನೆಗೆ ಸಾವಿರಾರು ರೂಪಾಯಿ ಖರ್ಚು ಮಾಡಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಗೋಳು ಯಾರೂ ಕೇಳದಂತಾಗಿದೆ. ಪ್ರತಿ ಬಾರಿಯೂ ಬರ, ಅತಿವೃಷ್ಟಿ, ನೆರೆ ಹಾವಳಿ ಹೀಗೆ ಅನೇಕ ತೊಂದರೆ ಸುಳಿಯಲ್ಲಿ ರೈತರು ಸಿಲುಕುತ್ತಿದ್ದಾರೆ. ಕಷ್ಟಪಟ್ಟು ದುಡಿದ ಬೆಳೆ ರೈತರ ಕೈಗೆ ಸಿಗುತ್ತಿಲ್ಲ. ಬೆಳೆ ವಿಮೆ ಹಣ ಕಟ್ಟಿದ್ದರೂ ಅದೂ ಕೂಡಾ ವಿಮೆ ಹಣ ರೈತರ ಖಾತೆಗೆ ಜಮಾ ಆಗಿರುವುದಿಲ್ಲ.
ಆದರೆ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದು ನಂತರ ರೈತರನ್ನು ಕಡೆಗಣಿಸುತ್ತಿರುವ ಸರ್ಕಾರಕ್ಕೆ ನಾಚಿಕೆ ಬರಬೇಕು. ಇದರಿಂದ ರೈತರು ಬೆಳೆಸಾಲ ಮರು ಪಾವತಿಸಲಾಗದೆ ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ರೈತರು ಬ್ಯಾಂಕಗಳಲ್ಲಿ ಪಡೆದುಕೊಂಡ ಸಾಲಗಳ ಅಸಲು ಮತ್ತು ಬಡ್ಡಿಯನ್ನು ಒಂದು ವರ್ಷದವರೆಗೆ ವಸೂಲಾತಿ ಮಾಡಬಾರದು. ಇಷ್ಟಾದರೂ ಸರ್ಕಾರ ಹಾಗೂ ಜಿಲ್ಲಾಡಳಿತ ಪರಿಹಾರ ಕಾರ್ಯಕೈಗೊಂಡಿಲ್ಲ. ಕೂಡಲೇ ತಾತ್ಕಾಲಿಕ ಪರಿಹಾರ ನೀಡುವ ಮೂಲಕ ಅಥಣಿ ತಾಲೂಕಿನಲ್ಲಿ ಅತಿವೃಷ್ಠಿಯಿಂದ ಹಾನಿಯಾದ ರೈತರ ರಕ್ಷಣೆಗೆ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು.




