ನವದೆಹಲಿ: ಎಐಸಿಸಿ ಪದಾಧಿಕಾರಿಗಳ ಪುನರ್ ರಚನೆ ಮಾಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಪದಾಧಿಕಾರಿಗಳನ್ನು AICC ಕಾರ್ಯದರ್ಶಿಗಳು/ಜಂಟಿ ಕಾರ್ಯದರ್ಶಿಗಳಾಗಿ ಆಯಾ ಪ್ರಧಾನ ಕಾರ್ಯದರ್ಶಿಗಳು/ಪ್ರಭಾರಿಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಎಐಸಿಸಿ ಕಾರ್ಯದರ್ಶಿಯಾಗಿ ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರನ್ನು ಗೋವಾ, ಡಿಯು -ಡಮನ್, ದಾದ್ರ ನಗರ್ ಹವೇಲಿ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಕರ್ನಾಟಕದ ಪಿ.ವಿ. ಮೋಹನ್, ಮನ್ಸೂರ್ ಅಲಿ ಖಾನ್ ಅವರಿಗೂ ಸ್ಥಾನ ನೀಡಲಾಗಿದ್ದು, ಎಐಸಿಸಿ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಕೇರಳ, ಲಕ್ಷದ್ವೀಪದ ಉಸ್ತುವಾರಿ ಕಾರ್ಯದರ್ಶಿ ಕಾರ್ಯದರ್ಶಿಗಳಾಗಿ ನಿಯೋಜಿಸಲಾಗಿದೆ.
ಎಐಸಿಸಿ ಕಾರ್ಯದರ್ಶಿಯಾಗಿ ಸೂರಜ್ ಹೆಗಡೆ ನೇಮಕ ಮಾಡಲಾಗಿದ್ದು, ತಮಿಳುನಾಡು, ಪುದುಚೇರಿ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.ಅನಿವಾಸಿ ಭಾರತೀಯ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.