ಚಾಮರಾಜನಗರ: ನವೆಂಬರ್ 26 ಪ್ರತಿಯೊಬ್ಬ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆ ಸಾಂಸ್ಕೃತಿಕ ,ಕ್ರೀಡೆ, ವಸ್ತು ಪ್ರದರ್ಶನಸ್ಪರ್ಧೆ, ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಜೆಎಸ್ಎಸ್ ಮಹಿಳಾ ಕಾಲೇಜು ಪ್ರಾಂಶುಪಾಲ ಪ್ರೊ ಡಾಕ್ಟರ್ ಏನ್ ಮಹಾದೇವಸ್ವಾಮಿ ತಿಳಿಸಿದರು.
ಮಂಗಳವಾರ ಮಧ್ಯಾಹ್ನ ಜೆಎಸ್ಎಸ್ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಏರ್ಪಡಿಸಿದ್ದ ಮಧುಮೇಹ ಕುರಿತು ಬಿತ್ತಿ ಪತ್ರಗಳ ಪ್ರದರ್ಶನ ಕುರಿತು ಮಾತನಾಡಿದವರು. ವಿದ್ಯಾರ್ಥಿ ಜೀವನದಲ್ಲಿ ಮಾನಸಿಕ ಒತ್ತಡದಿಂದ ಇರಬಾರದು. ದಿನನಿತ್ಯ ಯೋಗ. ಕ್ರೀಡೆ. ಕಾಲೇಜಿನಲ್ಲಿ ಪುಸ್ತಕಗಳು ಹೆಚ್ಚಾಗಿ ಓದುವ ಅಭಿರುಚಿ ಬೆಳೆಸಿಕೊಂಡರೆ ಉತ್ತಮ ವಿದ್ಯಾರ್ಥಿಯಾಗಿ ಪರೀಕ್ಷಾ ಸಂದರ್ಭದಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯ ಆಗುತ್ತದೆ ಎಂದು ತಿಳಿಸಿದರು.
ಉಪನ್ಯಾಸಕಿ ಮಮತಾ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆ ಹೊರತರಲು ಕಾಲೇಜು ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇಂದು ಮಧುಮೇಹ ಕುರಿತು ಬಿತ್ತಿ ಪತ್ರಗಳ ಪ್ರದರ್ಶನ ಮಾಡಿ ಆರೋಗ್ಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು, ದ್ವಿತೀಯ ಬಿ ಎಸ್ ಸಿ.
ವಿದ್ಯಾರ್ಥಿನಿ ಸಂಜನಾ. ಪ್ರಾಂಶುಪಾಲರು, ಉಪನ್ಯಾಸಕರು ಮಾರ್ಗದರ್ಶನದಲ್ಲಿ ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂಬುದರ ಬಗ್ಗೆ ಹಾಗೂ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ ಇದನ್ನು ನಾವು ಉಪಯೋಗಿಸಕೊಂಡಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಉಪನ್ಯಾಸಕರಾದ ಪಿಎಸ್ ಮಾನಸ, ಅರುಣ ಶ್ರೀ, ಜೆ ದಯನ, ಸೌಮ್ಯ, ಸುಮಾ ಸೇರಿದಂತೆ ಇತರರು ಹಾಜರಿದ್ದರು.
ವರದಿ :ಸ್ವಾಮಿ ಬಳೇಪೇಟೆ