Ad imageAd image

ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಅಡಿಯಲ್ಲಿ ಎಲ್ಲರೂ ಬದುಕಬೇಕಿದೆ:ಮುರಳಿದರ ಹಾಲಪ್ಪ

Bharath Vaibhav
ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಅಡಿಯಲ್ಲಿ ಎಲ್ಲರೂ ಬದುಕಬೇಕಿದೆ:ಮುರಳಿದರ ಹಾಲಪ್ಪ
WhatsApp Group Join Now
Telegram Group Join Now

ಮೊಳಕಾಲ್ಮೂರು:ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಅಡಿಯಲ್ಲಿ ಎಲ್ಲರೂ ಬದುಕಬೇಕಿದೆ.ಎಂದು ಕೆಪಿಸಿಸಿಯ ಉಪಾಧ್ಯಕ್ಷರಾದ ಮುರಳಿದರ ಹಾಲಪ್ಪ ರವರು ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬೆಳಗಾವಿಯಲ್ಲಿ ನಡೆಯುವ ಬೃಹತ್ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬಿಜೆಪಿ ಪಕ್ಷದಿಂದ ಸ್ವತಂತ್ರಕ್ಕಾಗಿ ಹೋರಾಟ ಮಾಡಿದವರು ಇಲ್ಲ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನೇ ಬದಲಿಸುವ ಹಗಲುಗನಸು ಕಾಣುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ವಿರುದ್ಧ ತರಾಟೆಗೆ ತೆಗೆದುಕೊಂಡರು.
27 ನೇ ತಾರೀಕು ಮಹಾತ್ಮ ಗಾಂಧೀಜಿಯವರ ಸವಿನೆನಪಿಗೋಸ್ಕರ ಬೆಳಗಾವಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು ಎಲ್ಲಾ ಭಾಗದಿಂದ ಲಕ್ಷ ಲಕ್ಷ ಜನಗಳು ಬಂದು ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.

ಅಮಿತ್ ಶಾ ರವರು ಬಾಬಾ ಸಾಹೇಬರನ್ನು ಸ್ಮರಣೆ ಮಾಡುವುದಕ್ಕಿಂತ ದೇವರನ್ನು ಸ್ಮರಣೆ ಮಾಡಬೇಕು ಎಂದು ಹೇಳಿರುವುದು ಅಕ್ಷಮ್ಮ ಅಪರಾಧ ನಮಗೆ ಬಾಬಾ ಸಾಹೇಬರೇ ದೇವರು ಎಂದು ಪೂಜೆ ಮಾಡುವ ನಮ್ಮ ಸಂಸ್ಕೃತಿ ಬಗ್ಗೆ ಅವರಿಗೆ ಗೊತ್ತಿಲ್ಲ ಎಂದು ಆಕ್ರೋಶವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ನಾಮನಿರ್ದೇಶನ ಸದಸ್ಯರಾದ ಜಿ ಪ್ರಕಾಶ್ ಮಾತನಾಡಿ. ಅಮಿತ್ ಶಾ ರವರ ಹೇಳಿಕೆಯು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ಈ ದೇಶದ ಬಡಜನರ ಶೋಷಿತರ ನಿರ್ಗತಕರಿಗೆ ಬದುಕನ್ನು ತಂದುಕೊಟ್ಟ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದು ಇಡೀ ದೇಶದಲ್ಲೇ ಚರ್ಚೆಯಾಗುತ್ತಿದೆ. ಸ್ವತಂತ್ರ ಬಂದಮೇಲೆ ಸಂವಿಧಾನದ ಅಡಿಯಲ್ಲಿ ಎಲ್ಲರೂ ಬದುಕುತ್ತಿದ್ದಾರೆ. ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದೇವರಂತೆ ಪೂಜಿಸುವ ಈ ನಾಡಿನಲ್ಲಿ ಅವರಿಗೆ ಅಪಮಾನ ಮಾಡಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ತಾಜ್ಮೀರ್ ಕೂಡ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರು ಹಾಲಸ್ವಾಮಿ ಸಂಪತ್ ಕುಮಾರ್ ,ಮೈಲಾರಿ ಮುಖಂಡರಾದ ಪಟೇಲ್ ಜಿ ಪಾಪ ನಾಯಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮುಲ್ಲಾ ನಾಗೇಶ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ, ಬಿಟಿ ನಾಗಭೂಷಣ್, ಷಣ್ಮುಗಪ್ಪ ಉಪಾಧ್ಯಕ್ಷರಾದ ಸತ್ಯನಾರಾಯಣ ಕಾಂಗ್ರೆಸ್ ಹೆಜ್ಜೆನಹಳ್ಳಿ ನಾಗರಾಜ್ ಮುಖಂಡರು ಇನ್ನು ಹಲವರು ಉಪಸ್ಥಿತರಿದ್ದರು.

ವರದಿ: ಪಿಎಂ ಗಂಗಾಧರ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!