ಬೆಂಗಳೂರು : ಡಾ.ಬಾಬು ಜಗಜೀವನರಾಮ್ ಅವರ ಜೀವನ ಚರಿತ್ರೆ ಹಾಗೂ ವ್ಯಕ್ತಿತ್ವವನ್ನು ಈಗಿನ ಯುವ ಪೀಳಿಗೆಗೆ ಪರಿಚಯಿಸುವುದು ಬಹಳ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಕರುಣ ಶೀಲ ಮೌರ್ಯ ಹೇಳಿದರು.
ಅವರು ಬೆಂಗಳೂರು ನಗರದ ಗೋವಿಂದ ರಾಜ ವಿಧಾನ ಸಭಾ ಕ್ಷೇತ್ರದ (ಬಿಬಿಎಂಪಿ) ಪಾಲಿಕೆ ಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ ರಾಜ್ಯ, ಜಿಲ್ಲಾ, ತಾಲೂಕ ಪದಾಧಿಕಾರಿಗಳ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಹಸಿರು ಕ್ರಾಂತಿ ಹರಿಕಾರ ಎಂದೇ ಕರೆಯಲ್ಪಡುವ ಡಾ.ಬಾಬು ಜಗಜೀವನರಾಮ್ ಅವರ 118ನೇ ಜಯಂತ್ಯುತ್ಸವ ಪ್ರಯುಕ್ತ ಡಾ. ಬಾಬು ಜಗಜೀವನರಾಮ್ ಮತ್ತು ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯ ಉದ್ಘಾಟಿಸಿ ಮಾತನಾಡಿದ ಅವರು ಶೋಷಿತರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಮಹಾನ್ ನಾಯಕ ಡಾ. ಬಾಬು ಜಗಜೀವನರಾಮ್ ಅವರು ಶೋಷಿತರ ಆಶಾಕಿರಣರಾಗಿದ್ದರು ಅವರು ನಾಲ್ಕು ದಶಕಗಳ ಕಾಲ ಸಂಸತ್ ಸದಸ್ಯರಾಗಿ ಅಪರಿಮಿತವಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ರಾಷ್ಟ್ರದ ಕೃಷಿ ಸಚಿವರಾಗಿ ಹಸಿರು ಕ್ರಾಂತಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಮೌರ್ಯ ಮನವರಿಕೆ ಮಾಡಿಕೊಟ್ಟರು.
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ಸಸಿಗೆ ನೀರು ಉಣಿಸಿ ಮಾತನಾಡಿದರು.
ಅಧ್ಯಕ್ಷರು, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧ್ಯಕ್ಷ ಎ ಆರ್ ಗೋವಿಂದಸ್ವಾಮಿ ಡಾ.ಬಾಬು ಜಗಜೀವನರಾಮ್ ಅವರ ಆದರ್ಶಗಳು ನಮ್ಮ ಪ್ರತಿ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕು ಎಂದರು.
ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ
ಶ್ರೀಧರ್ ಕೊಟ್ರೆ ಅವರಿಗೆ ನೇಮಕಾತಿ ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.
ಜಿಲ್ಲಾ ಗೌರವಾಧ್ಯಕ್ಷ ಆರ್ ನಾಗರಾಜು ಅವರು ಪ್ರಾಸ್ತಾವಿಕವಾಗಿ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ್ ಎಸ್ ಜಡಗಿ, ರಾಜ್ಯ ಉಪಾಧ್ಯಕ್ಷ ಪುಂಡಲೀಕರಾವ್,
ತಿಮ್ಮಣ್ಣ ಪಿ, ಮೂರ್ತಿ ಬಿ ಹೆಚ್,ಸುರೇಶ್,
ಶ್ರೀ ಪ್ರವೀಣ್ ಕುಮಾರ್ ,ರಾಘವೇಂದ್ರ ಇ ಡಿ, ವಾಗೇಶ್ ಕುಮಾರ್, ಈಶ್ವರ್, ಮಾರಣ್ಣ
ದಿವ್ಯ,ಕಾರ್ಯಕಾರಿ ಸಮಿತಿ ಸದಸ್ಯರು,
ಪೌರಕಾರ್ಮಿಕರು ,ಮಹಿಳಾ ಸದಸ್ಯರು ,ಅಧಿಕಾರಿಗಳು ಮತ್ತು ನೌಕರರು ಮುಂತಾದವರು ಇದ್ದರು.
ವರದಿಗಾರರು: ಅಯ್ಯಣ್ಣ ಮಾಸ್ಟರ್