Ad imageAd image

ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜಗಜೀವನ್ ರಾಮ್ ಜಯಂತಿ ಆಚರಣೆ

Bharath Vaibhav
ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜಗಜೀವನ್ ರಾಮ್ ಜಯಂತಿ ಆಚರಣೆ
WhatsApp Group Join Now
Telegram Group Join Now

ಸಿರುಗುಪ್ಪ : ನಗರದ ತಾಲೂಕು ಕ್ರೀಡಾಂಗಣದ ಮೈದಾನದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮವನ್ನು ಶಾಸಕ ಬಿ.ಎಮ್.ನಾಗರಾಜ ಅವರು ಉದ್ಘಾಟಿಸಿದರು.
ನಂತರ ಮಾತನಾಡಿ ಸ್ವಾತ್ಯಂತ್ರ ನಂತರದ ಸುವ್ಯವಸ್ಥೆಯ ಆಡಳಿತ, ಸಮಾನತೆ, ಪ್ರಜಾಪ್ರಭುತ್ವದ ತಿರುಳನ್ನೊಳಗೊಂಡ ಸಂವಿಧಾನವನ್ನು ನೀಡಿರುವ ಅಂಬೇಡ್ಕರರು ನಮಗೆಲ್ಲಾ ಆದರ್ಶನೀಯ ವ್ಯಕ್ತಿಯಾಗಿದ್ದಾರೆಂದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ, ತಹಶೀಲ್ದಾರ್ ಹೆಚ್.ವಿಶ್ವನಾಥ ಅವರು ಮಾತನಾಡಿ ದೇಶದ ಪ್ರತಿಯೊಬ್ಬ ಪ್ರಜೆಗೆ ಕಾನೂನಿನ ನಿಯಮಗಳನ್ನು ರಚಿಸಿಕೊಟ್ಟ ಮೊಟ್ಟ ಮೊದಲ ರುವಾರಿ ಡಾ.ಬಿ.ಆರ್.ಅಂಬೇಡ್ಕರರಾಗಿದ್ದಾರೆ.
ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅಂದರೆ ಹೊರದೇಶದಲ್ಲಿ ಡಾಕ್ಟರೇಟ್ ಪದವಿ ಪಡೆದ ಮೊಟ್ಟ ಮೊದಲನೆಯ ಭಾರತೀಯರಾಗಿದ್ದಾರೆ.


ಹಾಗೂ ಲಂಡನ್ನಿನ ವಸ್ತು ಸಂಗ್ರಹಾಲಯದಲ್ಲಿ ಕಾರ್ಲ್ ಮಾರ್ಕ್ಸ್ ಪ್ರತಿಮೆ ಜೊತೆಗೆ ಸೇರಿಸಲ್ಪಟ್ಟ ಇನ್ನೋರ್ವ ಏಕೈಕ ವ್ಯಕ್ತಿಯ ಪ್ರತಿಮೆಯೆಂದರೆ ನಮ್ಮ ಅಂಬೇಡ್ಕರರ ಹೆಮ್ಮೆಯ ಪ್ರತಿಮೆಯಾಗಿದೆಂದರು.
ಶ್ರೀ ಬಸವಭೂಷಣ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀವರ್ಚನ ನೀಡಿದರು. ಸರ್ಕಾರಿ ಪ್ರಥಮ ದರ್ಜೆಯ ಸಹಾಯಕ ಪ್ರಾಧ್ಯಾಪಕ ಕೆ.ಎಮ್.ಚಂದ್ರಕಾಂತ ಅವರು ವಿಶೇಷ ಉಪನ್ಯಾಸ ನೀಡಿದರು.
ಜಯಂತಿ ನಿಮಿತ್ತ ವಿವಿಧ ದಲಿಪರ ಸಂಘಟನೆಗಳಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ತಾಲೂಕು ಕ್ರೀಡಾಂಗಣದವೆರೆಗೂ ನಡೆದ ಅದ್ದೂರಿಯ ಮೆರವಣಿಗೆಯಲ್ಲಿ ಅಲೆಮಾರಿ, ಬುಡ್ಗಜಂಗಮ, ಹಕ್ಕಿಪಿಕ್ಕಿ ಜನಾಂಗದವರ ವೇಷಭೂಷಣಗಳು ನೋಡುಗರ ಗಮನ ಸೆಳೆಯಿತು.
ಇದೇ ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ್, ಉಪಾಧ್ಯಕ್ಷೆ ಯಶೋದಾಮೂರ್ತಿ, ಶ್ರೀ ವಾಲ್ಮೀಕಿ ವಿದ್ಯಾಭಿವೃದ್ದಿ ಟ್ರಸ್ಟ್ ತಾಲೂಕಾಧ್ಯಕ್ಷ ಬಿ.ಎಮ್.ಸತೀಶ್, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ತಾಲೂಕಾಧ್ಯಕ್ಷ ಡಾ.ಕೊಡ್ಲೆ ಮಲ್ಲಿಕಾರ್ಜುನ, ಡಾ.ಬಾಬು ಜಗಜೀವನ್ ರಾಮ್ ಸಂಘದ ಗೌರವಾಧ್ಯಕ್ಷ ಚಿಕ್ಕಬಳ್ಳಾರಿ ನಾಗಪ್ಪ, ವಕೀಲರಾದ ಮುನಿಸ್ವಾಮಿ, ಹಾಗೂ ಇನ್ನಿತರ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವರದಿ : ಶ್ರೀನಿವಾಸ ನಾಯ್ಕ

WhatsApp Group Join Now
Telegram Group Join Now
Share This Article
error: Content is protected !!