Ad imageAd image

ತುಮಕೂರಿಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ: ಡಾ.ಜಿ.ಪರಮೇಶ್ವರ್

Bharath Vaibhav
ತುಮಕೂರಿಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ: ಡಾ.ಜಿ.ಪರಮೇಶ್ವರ್
WhatsApp Group Join Now
Telegram Group Join Now

ತುಮಕೂರು: ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ವ್ಯಾಪ್ತಿಯು ಈಗಾಗಲೇ ನೆಲಮಂಗಲದವರೆಗೂ ತಲುಪಿದ್ದು, ತುಮಕೂರನ್ನೂ ಸಹ ತಲುಪುವ ಸಾಧ್ಯತೆ ಇದೆ. ನಗರದ ಬೆಳವಣಿಗೆಯನ್ನು ಮನಗಂಡ ಸರ್ಕಾರವು ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿದೆ. ಅದೇ ಮಾದರಿಯಲ್ಲೇ ತುಮಕೂರನ್ನು ಬೆಂಗಳೂರು ಉತ್ತರ ಎಂದು ಹೆಸರಿಡಲು ಚಿಂತನ ನಡೆಸಲಾಗಿದೆ ಎಂದು ಗೃಹಸಚಿವ
ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ನಗರದ ಹೊರವಲಯ ಮೈದಾಳ ರಸ್ತೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ಮಹಿಳೆಯರ ವರ್ಗಗಳ ಸ್ನಾತಕೋತ್ತರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತುಮಕೂರು ನಗರದ ಸುತ್ತಲಿನ 14 ಗ್ರಾಮ ಪಂಚಾಯಿತಿಗಳನ್ನು ಸೇರಿಸಿ ನಗರವನ್ನು ವಿಸ್ತರಿಸುವ ಪುಸ್ತಾವನೆ ಸಿದ್ಧವಿದ್ದು, ಹಂತ ಹಂತವಾಗಿ ವಿಸ್ತರಣಾ ಪಕ್ರಿಯೆಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೇ ಮನೆ ಕಟ್ಟಿಕೊಂಡು ವಾಸವಿರುವ ವಿವಾಸಿಗಳು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಅವರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮರ್ಪಕ ಕುಡಿಯುವ ನೀರು, ರಸ್ತೆ, ಒಳಚರಂಡಿ ವ್ಯವಸ್ಥೆಯಿಲ್ಲದೆ ಸಮಸ್ಯೆಗಳನ್ನುಎದುರಿಸುತ್ತಿದ್ದಾರೆ. ನಗರ ವಿಸ್ತರಣೀಕರಣದಿಂದ ನಾಗರಿಕರಿಗೆ
ಮೂಲಭೂತ ಸೌಕರ್ಯಗಳು ತಲುವುತ್ತವೆ ಎಂದು ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!