ಬೆಂಗಳೂರು : ಈಗಿನ ಪರಿಸ್ಥಿತಿಯಲ್ಲಿ ತಂತ್ರಜ್ಞಾನ ಯುಗದಲ್ಲಿ ಮಕ್ಕಳು ಪರೀಕ್ಷೆ ಬರೆದು ಹೆಚ್ಚು ಅಂಕ ಪಡೆದರೆ ಸಾಲದು ಶಿಕ್ಷಣ ಜೊತೆಗೆ ಸಾಮಾಜಿಕ ಜ್ಞಾನ, ಸಂಸ್ಕಾರ ಸಂಸ್ಕೃತಿ ಕಲಿಸಿಕೊಡುವ ಕೆಲಸ ಶಿಕ್ಷಣ ಸಂಸ್ಥೆಯ ಪ್ರಮುಖರು ಮತ್ತು ಶಿಕ್ಷಕರು ಆಸಕ್ತಿ ತೋರಿಸ ಬೇಕು ಎಂದು ಶಿಕ್ಷಣ ಪ್ರೇಮಿ ಸಹಾಯ ಹಸ್ತ ಸೇವಾ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷ ಡಾ. ರುದ್ರೇಗೌಡ್ರು ಹೇಳಿದರು.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜೇಶ್ವರಿನಗರ ವಾರ್ಡಿನ ಲೀಟಲ್ ವಿಂಗ್ಸ್ ಆಂಗ್ಲ ಶಾಲೆಯ ವಾರ್ಷಿಕೋತ್ಸವ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೆನಪಿನ ಕಾಣಿಕೆ ನೀಡಿ ಗೌರವಿಸಿ ಶುಭ ಹಾರೈಸಿ ಡಾ ರುದ್ರೇಗೌಡ್ರು ಮಾತನಾಡಿದರು.
ಈ ಸಂದರ್ಭದಲ್ಲಿ ಲೀಟಲ್ ವಿಂಗ್ಸ್ ಆಂಗ್ಲ ಶಾಲೆಯ ಆಡಳಿತ ಮಂಡಳಿಯವರು, ಶಿಕ್ಷಕ ಶಿಕ್ಷಕಿಯರು ಸಿಬ್ಬಂದಿ ವರ್ಗದವರು ಪೋಷಕರು ರಾಜೇಶ್ವರಿನಗರ ವಾರ್ಡಿನ ಸಮಸ್ತ ನಾಗರಿಕ ಬಂಧು ಭಗನಿಯರು ಇದ್ದರು.
ವರದಿ : ಅಯ್ಯಣ್ಣ ಮಾಸ್ಟರ್




