ಇಂದು ಸೇಡಂ ತಾಲೂಕಿನ 100 ಹಾಸಿಗೆ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆಯನ್ನು 16.50 ಕೋಟಿ ರೂಪಾಯಿ ವೆಚ್ಚದಲ್ಲಿ 150 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಭೂಮಿಪೂಜೆ ನೆರವೇರಿಸಿದರು.
2024-25ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಯ 15ನೇ ಹಣಕಾಸು ಹಾಗೂ ರಾಜ್ಯ ವಲಯ ಅನುದಾನದ ಅಡಿಯಲ್ಲಿ ಸೇಡಂ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಸೇಡಂ ತಾಲೂಕಿನ ಶೈಕ್ಷಣಿಕ, ಆರೋಗ್ಯ ಕ್ಷೇತ್ರವನ್ನು ಜನರಿಗೆ ಸಹಾಯಕಾರಿಯಾಗಿಸುವ ನಿಟ್ಟಿನಲ್ಲಿ ಅನುದಾನವನ್ನು ನಿರಂತರ ಬಿಡುಗಡೆಗೊಳಿಸಲಾಗುತ್ತಿದೆ ಹಾಗೂ ಸೇಡಂ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವುದರಿಂದ ಈ ಭಾಗದ ಸಾರ್ವಜನಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ವೀರೇಂದ್ರ ಸಾಹುಕಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣ ರೆಡ್ಡಿ ಪಾಟೀಲ್, ಬಸವರಾಜ ಪಾಟೀಲ್, ಸಾರ್ವಜನಿಕ ಆಸ್ಪತ್ರೆ ಮುಖ್ಯಸ್ಥರು, ವೈದ್ಯರು, ಆಶಾ ಕಾರ್ಯಕರ್ತೆಯರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




