ಬೆಂಗಳೂರು: ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗೋದರಲ್ಲಿ ಎರಡು ಮಾತಿಲ್ಲ. ಅದು ಖಚಿತ ಅಂತ ಸಾಹಿತಿ, ಕಾದಂಬರಿಕಾರ ಡಾ.ಎಸ್ ಎಲ್ ಭೈರಪ್ಪ ಹೇಳಿದ್ದಾರೆ.
ಇಂದು ವಾರಣಾಸಿ ಕ್ಷೇತ್ರದಿಂದ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿ ನರೇಂದ್ರ ಮೋದಿಯವರು ನಾಮಪತ್ರ ಸಲ್ಲಿಸಿದ್ದಾರೆ.
ಈ ವಿಚಾರವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಈ ಐತಿಹಾಸಿಕ ಸ್ಥಾನದ ಜನರಿಗೆ ಸೇವೆ ಸಲ್ಲಿಸುವುದು ಗೌರವವಾಗಿದೆ.
ಜನರ ಆಶೀರ್ವಾದದಿಂದ, ಕಳೆದ ದಶಕದಲ್ಲಿ ಗಮನಾರ್ಹ ಸಾಧನೆಗಳು ನಡೆದಿವೆ. ಮುಂದಿನ ದಿನಗಳಲ್ಲಿ ಈ ಕೆಲಸದ ವೇಗವು ಇನ್ನಷ್ಟು ವೇಗವಾಗಲಿದೆ ಎಂದು ತಿಳಿಸಿದ್ದಾರೆ.
ಇದೇ ಹೊತ್ತಿನಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಾಹಿತಿ ಡಾ.ಎಸ್ ಎಲ್ ಭೈರಪ್ಪ ಅವರು, ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗೋದು ಖಚಿತ ಎಂಬುದಾಗಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.