Ad imageAd image
- Advertisement -  - Advertisement -  - Advertisement - 

ಬಿಜೆಪಿ ಅಧಿಕಾರಕ್ಕೆ ಬಂದ್ರೆ ತಾಯಂದಿರು ಗಂಡ-ಮಕ್ಕಳನ್ನು ಕಳೆದುಕೊಳ್ತಾರೆ : ಡಾ.ಯತೀಂದ್ರ ಸಿದ್ಧರಾಮಯ್ಯ 

Bharath Vaibhav
ಬಿಜೆಪಿ ಅಧಿಕಾರಕ್ಕೆ ಬಂದ್ರೆ ತಾಯಂದಿರು ಗಂಡ-ಮಕ್ಕಳನ್ನು ಕಳೆದುಕೊಳ್ತಾರೆ : ಡಾ.ಯತೀಂದ್ರ ಸಿದ್ಧರಾಮಯ್ಯ 
WhatsApp Group Join Now
Telegram Group Join Now

ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲಾ ಧರ್ಮದ ತಾಯಂದಿರು ಗಂಡ-ಮಕ್ಕಳನ್ನು ಕಳೆದುಕೊಳ್ತಾರೆ ಎಂಬುದಾಗಿ ಡಾ.ಯತೀಂದ್ರ ಸಿದ್ಧರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಪ್ರಧಾನಿ ಮೋದಿ ಅವರನ್ನು ಟೀಕಿಸೋ ಭರದಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ, ಜನರ ಟೀಕೆಗೆ ಗುರಿಯಾಗಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆಸಿದ್ದಾವೆ. ಯಾವಾಗ್ಲೂ ಹಿಂದೂಗಳಿಗೆ ಅನ್ಯಾಯ ಆಗಿಲ್ಲ.

ಈ ಸಲ ಏನಾದ್ರೂ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದ್ರೇ ಹಿಂದೂ ಮಹಿಳೆಯರ ಮಂಗಳಸೂತ್ರ ಮಾತ್ರವಲ್ಲ, ಎಲ್ಲಾ ಧರ್ಮದ ತಾಯಂದಿರು ತಮ್ಮ ಮಕ್ಕಳು ಹಾಗೂ ಗಂಡಂದಿರನ್ನು ಕಳೆದುಕೊಳ್ತಾರೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದಕ್ಕೆ ಕಾರಣ ದೇಶದಲ್ಲಿ ಬಿಜೆಪಿ ಕೋಮುಗಲಭೆ, ದೊಂಬಿ, ಗಲಾಟೆ ಸೃಷ್ಠಿ ಮಾಡ್ತಿದೆ. ಒಬ್ಬರನ್ನೊಬ್ಬರನ್ನು ಬಡಿದಾಡಿಕೊಂಡು ಸಾಯುವಂತೆ ಮಾಡ್ತಾರೆ. ಇದು ಇಡೀ ಸಮಾಜ ಅಧಃಪತನಕ್ಕೆ ಹೋಗೋದಕ್ಕೆ ಕಾರಣವಾಗಲಿದೆ ಎಂಬುದಾಗಿ ಕಿಡಿಕಾರಿದ್ದಾರೆ.

 

WhatsApp Group Join Now
Telegram Group Join Now
Share This Article
error: Content is protected !!